ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಚಿಕ್ಕಬಳ್ಳಾಪುರ ಚುನಾವಣೆ ವೇಳೆ ಅಕ್ರಮ

Srinivasa Murthy VN
Updated On : 20 Apr 2014, 1:13 am

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ವೇಳೆ ಭಾರಿ ಪ್ರಮಾಣದಲ್ಲಿ ಅಕ್ರಮಗಳು ನಡೆದಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಈ ಕ್ಷೇತ್ರದ ಜೆಡಿಯು ಅಭ್ಯರ್ಥಿ ಜಿ.ಕೆ.ಸಿ. ರೆಡ್ಡಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಪೊಲೀಸರು 10 ಕೋಟಿ ಬೆಲೆಬಾಳುವ ಮದ್ಯ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಒಂದೇ ಕ್ಷೇತ್ರದಲ್ಲಿ ಇಷ್ಟೊಂದು ಅಕ್ರಮ ನಡೆದಿರುವುದು ಚಿಕ್ಕಬಳ್ಳಾಪುರದಲ್ಲಿ ಮಾತ್ರ ಎಂದು ಜಿ.ಕೆ.ಸಿ. ರೆಡ್ಡಿ ಆಪಾದಿಸಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಕ್ಷೇತ್ರದ 2,200 ಮತಗಟ್ಟೆಯಲ್ಲಿ ಮತದಾರರಿಗೆ ಹಂಚುವುದಕ್ಕಾಗಿ ತಲಾ 2ಲಕ್ಷ ಅಕ್ರಮ ಹಣ ನೀಡಿದ್ದಾರೆ. ಮತದಾನದ ದಿನವೇ ಸುಮಾರು 50 ಕೋಟಿ ಹಣ ಹಂಚಿ ಚುನಾವಣೆ ಆಯೋಗದ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಆಪಾದಿಸಿದ್ದಾರೆ.
ಚುನಾವಣಾ ಆಯೋಗದ ನಿಯಮದ ಪ್ರಕಾರ ಲೋಕಸಭಾ 70 ಲಕ್ಷಕ್ಕಿಂತ ಹೆಚ್ಚು ವೆಚ್ಚ ಮಾಡುವಂತಿಲ್ಲ. ಆದರೆ ಅಕ್ರಮವಾಗಿ ಸೀರೆ, ಅಕ್ಕಿ, ಮದ್ಯ, ಸೀರೆ, ಮಾಂಸವನ್ನು ಹಂಚಿದ್ದಾರೆ. ಪೊಲೀಸರು ಇವುಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕ ಮತ್ತು ಕ್ಲೀನರ್‌ಗಳನ್ನು ಬಂಧಿಸಿದ್ದಾರೆ. ಆದರೆ ನಿಜವಾದ ಆರೋಪಿಗಳು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಚುನಾವಣಾ ಸಂದರ್ಭದಲ್ಲಿ ಪಕ್ಷಗಳು ನೀಡಿದ ಮದ್ಯವನ್ನು ಯಥೇಚ್ಚವಾಗಿ ಸೇವಿಸಿ ದೊಡ್ಡಬಳ್ಳಾಪುರ ತಾಲೂಕಿನ ರಾಜಣ್ಣ ಎಂಬುವರು ಮೃತಪಟ್ಟಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿಗಳು ಅಕ್ರಮ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಆರೋಪಿಸಿದರು.
ಈಗಾಗಲೇ 2 ಬಾರಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಮೂರನೇ ಬಾರಿ ದೂರು ದಾಖಲಿಸಿದ್ದೇನೆ. ಆಯೋಗ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೈಕೋರ್ಟ್‌ನ ಮೊರೆ ಹೋಗುವುದಾಗಿ ತಿಳಿಸಿದರು.

 ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಪೊಲೀಸರು 10 ಕೋಟಿ ಬೆಲೆಬಾಳುವ ಮದ್ಯ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಒಂದೇ ಕ್ಷೇತ್ರದಲ್ಲಿ ಇಷ್ಟೊಂದು ಅಕ್ರಮ ನಡೆದಿರುವುದು ಚಿಕ್ಕಬಳ್ಳಾಪುರದಲ್ಲಿ ಮಾತ್ರ
 ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಕ್ಷೇತ್ರದ 2,200 ಮತಗಟ್ಟೆಯಲ್ಲಿ ಮತದಾರರಿಗೆ ಹಂಚುವುದಕ್ಕಾಗಿ ತಲಾ 2ಲಕ್ಷ ಅಕ್ರಮ ಹಣ ನೀಡಿದ್ದಾರೆ. ಮತದಾನದ ದಿನವೇ ಸುಮಾರು 50 ಕೋಟಿ ಹಣ ಹಂಚಿ ಚುನಾವಣೆ ಆಯೋಗದ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement