ಕೃಷ್ಣಗಿರಿ ಕಾಂಗ್ರೆಸ್ ಅಭ್ಯರ್ಥಿ ಗೆಲವು ಖಚಿತ: ಶ್ರೀನಿವಾಸ್
ತಮಿಳುನಾಡಲ್ಲಿ ಸಿದ್ದರಾಮಯ್ಯ ಜತೆ ಶ್ರೀನಿವಾಸ್ ಪ್ರಚಾರ
ಕೆಜಿಎಫ್: ಕಾಂಗ್ರೆಸ್ ಮುಖಂಡ, ಎಐಸಿಸಿ ಸದಸ್ಯ ಎನ್.ಶ್ರೀನಿವಾಸ್ ಅವರಿಗೆ ತಮಿಳುನಾಡಿನ ಕೃಷ್ಣಗಿರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಎ.ಚೆಲ್ಲಕುಮಾರ್ ಪರ ಪ್ರಚಾರ ವೀಕ್ಷಕರನ್ನಾಗಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಅವರು ಶನಿವಾರ ಕೃಷ್ಣಗಿರಿ ಕ್ಷೇತ್ರದ ವಿವಿಧೆಡೆ ಪ್ರಚಾರ ಕೈಗೊಂಡಿದ್ದಾರೆ. ಈ ವಿಷಯವನ್ನು ಅವರೇ ಸ್ವತಃ ತಿಳಿಸಿದ್ದಾರೆ.
ಈ ವೇಳೆ ತಮಿಳುನಾಡು ಸೇರಿದಂತೆ ರಾಜ್ಯದ ಇತರೆ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು. ಕೋಲಾರ ಕ್ಷೇತ್ರದಲ್ಲಿ ಮುನಿಯಪ್ಪ ಗೆಲುವು ಖಚಿತ ಎಂದು ತಿಳಿಸಿದರು.
ಅದೇ ರೀತಿ ತಮಿಳುನಾಡಿನಲ್ಲಿ ಯುಪಿಎ ಸರ್ಕಾರ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿರುವ ಹಿನ್ನಲೆಯಲ್ಲಿ ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಚೆಲ್ಲಕುಮಾರ್ ಗೆಲವು ಸಾಧಿಸಲಿದ್ದಾರೆ ಎಂದು ಅವರು ಶ್ರೀನಿವಾಸ್ ತಿಳಿಸಿದ್ದಾರೆ.