ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಗುತ್ತಿಗೆದಾರರ ನಿರ್ಲಕ್ಷ್ಯ: ಕಳಪೆ ಕಾಮಗಾರಿ

Srinivasa Murthy VN
Updated On : 20 Apr 2014, 11:59 am

ಚರಂಡಿ ಕಾಮಗಾರಿಗೆ ನಗರೋತ್ಥಾನ ಯೋಜನೆಯಡಿ 5 ಕೋಟಿ ಹಣ ಬಿಡುಗಡೆ
ಬಾಗೇಪಲ್ಲಿ: ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಪಟ್ಟಣದ ಜೆಎಂಎಫ್‌ಸಿ ಸಮೀಪದಿಂದ ನೂತನ ಬಡಾವಣೆವರೆಗೆ ನಡೆಯುತ್ತಿರುವ ಚರಂಡಿ ಕಾಮಗಾರಿ ಸಂಬಂಧಪಟ್ಟ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಮಂದಗತಿಯಲ್ಲಿ ಸಾಗುವ ಜೊತೆಗೆ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ನಗರೋತ್ಥಾನ ಯೋಜನೆಯಡಿ ಪಟ್ಟಣದಲ್ಲಿ 5 ಕೋಟಿ ವೆಚ್ಚದಲ್ಲಿ  ವಿವಿಧ ಕಾಮಗಾರಿಗಳು ಪ್ರಾರಂಭವಾಗಿದ್ದು, 21ನೇ ವಾರ್ಡಿನ ಕೋರ್ಟಿನ ಪಕ್ಕದಿಂದ ನೂತನ ಬಡಾವಣೆಗೆ ಚರಂಡಿ ಮತ್ತು ಟಾರ್ ರಸ್ತೆ ನಿರ್ಮಾಣಕ್ಕಾಗಿ 50 ಲಕ್ಷ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭ ಮಾಡಲಾಗಿದೆ. ಆದರೆ ಉಪಗುತ್ತಿಗೆಯನ್ನು ಪಡೆದಿರುವ ಗುತ್ತಿಗೆದಾರರು ಇಷ್ಟಬಂದ ರೀತಿಯಲ್ಲಿ ಕಾಮಗಾರಿ ನಡೆಸುತ್ತಿದ್ದಾರೆ. ಕಾಮಗಾರಿ ಪ್ರಾರಂಭಿಸಿ ಒಂದೂವರೆ ತಿಂಗಳು ಕಳೆದರೂ ಈವರೆಗೆ ಕೆಲಸವನ್ನೂ ಮುಗಿಸಿಲ್ಲ. ಜೊತೆಗೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಸಾರ್ವಜನಿಕರು ಆರೋಪಿದ್ದಾರೆ. ಕಾಮಗಾರಿ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಎಂಜಿನಿಯರ್ ಬಂದು ಗುಣಮಟ್ಟದ ತನಿಖೆ ನಡೆಸಬೇಕಿತ್ತು. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿರಬಹುದು ಎಂಬ ಅನುಮಾನ ಕಾಡುತ್ತಿದೆ. ಎಸ್ಟಿಮೇಟ್ ಪ್ರಕಾರದಂತೆ ಕಾಮಗಾರಿ ನಡೆಸುತ್ತಿಲ್ಲ ಮತ್ತು ಗುಣಮಟ್ಟವನ್ನು ಕಾಪಾಡುತ್ತಿಲ್ಲ. ಗುತ್ತಿಗೆಯನ್ನು ಉಪಗುತ್ತಿಗೆ ನೀಡಿರುವ ಕಾರಣ ಗುಣಮಟ್ಟದಲ್ಲಿ ಏರುಪೇರಾಗಿದೆ ಎಂದು ಇಲ್ಲಿನ ನಿವಾಸಿಗಳಾದ ಬಿ.ಎಚ್. ರಫೀಕ್, ಮಂಜುನಾಥರೆಡ್ಡಿ, ಲಕ್ಷ್ಮೀನಾರಾಯಣಪ್ಪ ದೂರಿದ್ದಾರೆ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement