ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರೈತರಿಗೆ ಕಿರುಕುಳ: ಪ್ರತಿಭಟನೆ

Mainashree
Updated On : 24 Apr 2014, 12:07 pm

ಕೋಲಾರ: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಸಾಲವನ್ನು ವಸೂಲಿ ಮಾಡುವ ನೆಪದಲ್ಲಿ ರೈತರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಮಾಜ ಸೇನೆಯಿಂದ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಕೋಲಾರ ಜಿಲ್ಲೆಯ ಎಲ್ಲಾ ಐದು ತಾಲೂಕುಗಳನ್ನು ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿರುವುದರಿಂದ ಬ್ಯಾಂಕುಗಳ ಅಧಿಕಾರಿಗಳು ಸಾಲ ವಸೂಲಾತಿಗೆ ಕಾಲಾವಕಾಶ ನೀಡಬೇಕು. ಬಲವಂತವಾಗಿ ಸಾಲ ವಸೂಲಾತಿ ಮಾಡಿದಲ್ಲಿ ರೈತರ ಆತ್ಮಹತ್ಯೆಗೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಕೂಡಲೇ ಬ್ಯಾಂಕಿನ ಅಧಿಕಾರಿಗಳ ಸಭೆಯನ್ನು ಕರೆಸಿ ಮುಂದಿನ ಮಳೆ ಬೆಳೆಯಾಗುವವರೆಗೂ ರೈತರಿಗೆ ತೊಂದರೆ ನೀಡದೇ ಕಾಲಾವಕಾಶ ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸೂಲಿಕುಂಟೆ ಆನಂದ್, ಜಿಲ್ಲಾ ಗೌರವಾಧ್ಯಕ್ಷ ಎ.ಎಲ್.ಎನ್. ಸ್ವಾಮಿ, ಹಳೇಪಾಳ್ಯ ಮಂಜುನಾಥ್, ಹುಣಸನಹಳ್ಳಿ ರಮೇಶ್ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement