ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸ್ವೀಪ್‌ನಿಂದ ಮತದಾನ ಹೆಚ್ಚಳ

Mainashree
Updated On : 24 Apr 2014, 12:06 pm

ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮತದಾನ ಪ್ರಮಾಣದಲ್ಲಿ ಮೂರನೇ ಸ್ಥಾನಗಳಿಸಿದ್ದು ಇದಕ್ಕೆ ಸ್ವೀಪ್ ಸಮಿತಿಯ ಕಾರ್ಯಚಟುವಟಿಕೆಗಳಿಗೆ ಮಾಧ್ಯಮ ಹಾಗೂ ಅಧಿಕಾರಿ ವರ್ಗದಿಂದ ಸಿಕ್ಕ ಪ್ರೋತ್ಸಾಸವೇ ಕಾರಣ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋತ್ ಪ್ರಿಯಾ ಸಂತಸ ವ್ಯಕ್ತಪಡಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಸ್ವೀಪ್ ಸಮಿತಿಯಿಂದ ಬುಧವಾರ ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪ್ರಜಾತಂತ್ರ ವ್ಯವಸ್ಥೆ ಬಲಗೊಳ್ಳಬೇಕಾದರೆ ಚುನಾವಣೆಗಳಲ್ಲಿ ಜನತೆಯ ಪಾತ್ರ ಮುಖ್ಯ. ಮತದಾನ ಹೆಚ್ಚಾಗದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆ ಕಳೆ ಗುಂದುತ್ತದೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ.69.35ರಷ್ಟು ಮತದಾನವಾಗಿತ್ತು. ಈ ಬಾರಿ 75.50ರಷ್ಟು ಮತದಾನವಾಗಿ ಶೇ.6.15ರಷ್ಟು ಹೆಚ್ಚು ಮತದಾನ ಪ್ರಮಾಣದ ಮೂಲಕ 3ನೇ ಸ್ಥಾನ ಪಡೆದುಕೊಂಡಿದ್ದು ಮತದಾರರು ಮುಂದಿನ ಸಲ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗಣೇಶ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಂಗಾರೆಡ್ಡಿ ಅವರಿಗೆ ಸ್ವೀಪ್ ಸಮಿತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಜಿಲ್ಲಾ ಚುನಾವಣಾಧಿಕಾರಿ ಡಿ.ಕೆ. ರವಿ ಅವರು ಮತದಾನದ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸಲು ಕಾಲೇಜುಗಳಿಗೆ ಹೋಗಿ ವಿದ್ಯಾರ್ಥಿಗಳಿಗಳಲ್ಲಿ ಪ್ರೇರಣೆ ತುಂಬಿ ಯುವಕರು ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಿದರೆಂದು ಗೋಪಿನಾಥ್ ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿಗಳು ಶೇ.80ಕ್ಕಿಂತ ಹೆಚ್ಚು ಮತದಾನವಾಗಬೇಕೆಂದು ಗುರಿ ಹೊಂದಿದ್ದರು, ಇದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದರು, ಕೆಲ ಗ್ರಾಮಗಳಲ್ಲಿ ಮತದಾರರು ಬಹಿಷ್ಕಾರದ ಬೆದರಿಕೆಯ ನಡುವೆಯೂ ಮತಗಟ್ಟೆಗಳಿಗೆ ಬಂದು ಮತದಾನ ಮಾಡಿದ್ದು ವಿಶೇಷವೆಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement