ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರಸ್ತೆಗಾಗಿ ರಾಜಾಕಾಲುವೆ ಒಡೆದ್ರೂ ಕೇಳುವವರಿಲ್ಲ!

Mainashree
Updated On : 26 Apr 2014, 12:11 pm

ಮಾಲೂರು: ಇಲ್ಲಿನ ದೊಡ್ಡ ಕೆರೆ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಲೇಔಟ್‌ಗಾಗಿ ಖಾಸಗಿ ವ್ಯಕ್ತಿಯೊಬ್ಬರು, ಇತ್ತೀಚೆಗೆ ನಿರ್ಮಾಣವಾಗಿದ್ದ ರಾಜಾಕಾಲುವೆ ಒಡೆದು ರಸ್ತೆ ನಿರ್ಮಿಸಿದ್ದಾರೆ. ಇದು ಸಾರ್ವಜನಿಕರಿಂದ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಬೆಂಗಳೂರು ಮುಖ್ಯ ರಸ್ತೆಯಲ್ಲಿರುವ ದೊಡ್ಡ ಕೆರೆ ಮುಂಭಾಗದಲ್ಲೇ ನಿರ್ಮಾಣವಾಗುತ್ತಿರುವ ಲೇಔಟ್‌ಗೆ ದಿನ ನಿತ್ಯ ನೂರಕ್ಕೂ ಹೆಚ್ಚು ಟ್ರ್ಯಾಕ್ಟರ್‌ನಲ್ಲಿ ಕೆರೆ ಮಣ್ಣುನ್ನು ಸಾಗಿಸಲಾಗುತ್ತಿದೆ. ಇದಕ್ಕಾಗಿ ಇತ್ತೀಚೆಗೆ ಲಕ್ಷಾಂತರ ರುಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ರಾಜಾಕಾಲುವೆಯನ್ನೇ ಒಡೆದು ಹಾಕಲಾಗಿದೆ. ಹೀಗಿದ್ದರೂ ಇದು ತಾಲೂಕು ಆಡಳಿತದ ಕಣ್ಣಿಗೆ ಬೀಳದಿರುವುದ ಆಶ್ಚರ್ಯಕ್ಕೆ ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಯ ನಿವಾಸಿ ನಾರಾಯಣಸ್ವಾಮಿ. ಮಣ್ಣು ಸಾಗಿಸುವ ಟ್ರ್ಯಾಕ್ಟರ್‌ಗಳಿಂದ ರಸ್ತೆ ಹಾಗೂ ಸುತ್ತಮುತ್ತಲ ಪರಿಸರ ಧೂಳುಮಯವಾಗಿದೆ. ದ್ವಿಚಕ್ರವಾಹನಗಳ ನಿತ್ಯ ಅಪಘಾತಕ್ಕೆ ಕಾರಣವಾಗುತ್ತಿದೆ. ಈಗಾಗಲೇ ದೊಡ್ಡ ಕೆರೆಗಳಿಂದ ನಿತ್ಯ ನೂರಕ್ಕೂ ಹೆಚ್ಚು ಟ್ರ್ಯಾಕ್ಟರ್-ಟಿಪ್ಪರ್‌ಗಳಲ್ಲಿ ಮಣ್ಣು ಸಾಗಿಸಲಾಗುತ್ತಿದ್ದು, ಕೆರೆ ಬರಿದಾಗುತ್ತಿದೆ ನಾರಾಯಣಸ್ವಾಮಿ ದೂರಿದ್ದಾರೆ. ಇನ್ನಾದರೂ ತಾಲೂಕು ಆಡಳಿತ ಎಚ್ಚೆತ್ತು ದೊಡ್ಡ ಕೆರೆಯನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement