9 ಲಕ್ಷ ಮೌಲ್ಯದ ಮದ್ಯ ವಶ: ಒಬ್ಬನ ಬಂಧನ
ಕೆಜಿಎಫ್: ಅಕ್ರಮವಾಗಿ ಶೇಖರಿಸಿಟ್ಟಿದ್ದ 9 ಲಕ್ಷ ಮೌಲ್ಯದ ಮದ್ಯದ ಕೇಸ್‌ಗಳನ್ನು ಪೊಲೀಸರು ದಾಳಿ ವಶಪಡಿಸಿಕೊಂಡ ಘಟನೆ ಭಾನುವಾರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನು ಬಂಧಿಸಲಾಗಿದೆ.
ದಾದೇನಹಳ್ಳಿ ಗ್ರಾಮದ ರಾಜಣ್ಣ ಎಂಬುವರ ತೋಟದ ಮನೆಯಲ್ಲಿ ಸುಮಾರು ಅಕ್ರಮವಾಗಿ 475 ಮದ್ಯದ ಕೇಸ್‌ಗಳನ್ನು ಶೇಖರಿಸಿಡಲಾಗಿತ್ತು.
ಈ ಬಗ್ಗೆ ಮಾಹಿತಿ ಪಡೆದ ಬೇತಮಂಗಲ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.
ನಾರಾಯಣಸ್ವಾಮಿ ಎಂಬುವವರನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಉಪರಕ್ಷಣಾಧಿಕಾರಿ ಎ.ಕೆ.ವಿವೇಕಾನಂದ, ಬಂಗಾರಪೇಟೆ ಇನ್ಸ್‌ಪೆಕ್ಟರ್ ವೆಂಕಟಾಚಲಪತಿ ಪಿಎಸ್‌ಐ ಗೋವಿಂದಯ್ಯ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಗೆ ಅಬಕಾರಿ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.