ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕೊಳೆತ ಸ್ಥಿತಿಯಲ್ಲಿ ಎರಡು ಶವ ಪತ್ತೆ

Mainashree
Updated On : 27 Apr 2014, 11:47 am

ಚಿಂತಾಮಣಿ:  ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಏಟಗೊಲ್ಲಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕ ಮತ್ತು ವಿವಾಹಿತ ಮಹಿಳೆ ಸೇರಿದಂತೆ ಎರಡು ಶವಗಳು ಪತ್ತೆಯಾಗಿವೆ.  
ಮೃತಪಟ್ಟವರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಗ್ರಾಮಕ್ಕೆ ಸಮೀಪದಲ್ಲಿ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿ ಗ್ರಾಮಸ್ಥರು ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿದ್ದ ಎರಡು ಶವಗಳು ಪತ್ತೆಯಾಗಿವೆ. ಈ ಸುದ್ದಿ ತಿಳಿಯುತ್ತಿದ್ದಂತೆ ಬಟ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮಹಿಳೆಗೆ 33 ವರ್ಷದವಳಾಗಿದ್ದು, ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಯುವಕ ವಿವಾಹಿತ ಮಹಿಳೆಯನ್ನು ಇಲ್ಲಿಗೆ ಕರೆದುಕೊಂಡು ಬಂದು ಕತ್ತು ಹಿಸುಕಿ ಸಾಯಿಸಿದ್ದಾನೆ. ಆ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತ ಯುವಕನ ಅಂಗಿಯ ಮೇಲೆ ಆಂಧ್ರ ಪ್ರದೇಶದ ಬಿ.ಕೊತ್ತಕೋಟ ವಿಳಾಸವಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement