ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜನರ ನಂಬಿಕೆ ಉಳಿಸಿಕೊಳ್ಳುವೆ

Mainashree
Updated On : 27 Apr 2014, 11:46 am

ಚಿಕ್ಕಬಳ್ಳಾಪುರ: ತಮ್ಮ ಅಧಿಕಾರಾವಧಿಯಲ್ಲಿ ಹಿಂದಿನ ಜನಪ್ರತಿನಿಧಿಗಳಿಗಿಂತಲೂ ಹೆಚ್ಚಿನ ಆದ್ಯತೆಯನ್ನು ಕೊಟ್ಟು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಆ ಮೂಲಕ ಜನರು ತಮ್ಮ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಶಾಸಕ ಡಾ. ಕೆ.ಸುಧಾಕರ್ ಹೇಳಿದರು.
ತಾಲೂಕಿನ ಪೆರೇಸಂದ್ರದಲ್ಲಿ ಪ್ರಧಾನಿ ಗಾಮ್ ಸಡಕ್ ಯೋಜನೆಯಡಿ ಕೈಗೊಂಡಿದ್ದ ಸುಮಾರು 4 ಕೋಟಿ ವೆಚ್ಚದಲ್ಲಿ ಪೆರೇಸಂದ್ರದಿಂದ ಕಸವಗುಟ್ಟಹಳ್ಳಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ರಾಮೀಣ ಭಾಗಗಳ ಅಭಿವೃದ್ಧಿಗೆ ವಿಶೇಷ ಕಾಳಜಿಯನ್ನು ವಹಿಸಿ ಕೋಟ್ಯಂತರ ರುಪಾಯಿ ಅನುದಾನವನ್ನು ಬಿಡುಗಡೆ ಮಾಡುತ್ತಿದೆ.
ಅದರಲ್ಲೂ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ತ್ವರಿತಗತಿಯಲ್ಲಿ ನಡೆಯುವಂತಾಗಲು ಸಹಕಾರವನ್ನು ನೀಡುತ್ತಿದೆ. ಇದನ್ನು ಸದುಪಯೋಗಪಡಿಸಿಕೊಂಡು ರಸ್ತೆ, ಚರಂಡಿ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಜನರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ಸ್ವಾಮಿ, ತಾ.ಪಂ.ಮಾಜಿ ಅಧ್ಯಕ್ಷ ಚಿಕ್ಕಗರಿಗಿರೆಡ್ಡಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಪಂ ಮಾಜಿ ಉಪಾಧ್ಯಕ್ಷೆ ಪುಷ್ಪಾವತಮ್ಮ, ಗ್ರಾಪಂ ಅಧ್ಯಕ್ಷರಾದ ಮೂರ್ತಿ, ಅಶ್ವತ್ಥಪ್ಪ, ಸದಸ್ಯ ನಾಗರಾಜ್, ಮುಖಂಡರಾದ ಪಿ.ಎನ್.ಕೇಶವರೆಡ್ಡಿ, ಶಂಕರ್ ರೆಡ್ಡಿ, ನಾಗೇಶ್, ರಾಜಣ್ಣ, ನಾರಾಯಣಸ್ವಾಮಿ, ರಾಮಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement