ವಿವೇಕಾನಂದ ಆದರ್ಶ ಪಾಲಿಸಿ: ಜಿಪಂ ಸಿಇಒ
ಚಿಂತಾಮಣಿ: ಸ್ವಾಮಿ ವಿವೇಕಾನಂದ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆ ಎಂದು ಚಿಕ್ಕಬಳ್ಳಾಪುರ ಜಿಪಂ ಸಿಇಒ ನೀಲಾ ಮಂಜುನಾಥ್ ಹೇಳಿದರು.
ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
ಜೀವನದಲ್ಲಿ ಸಾಧನೆ ಎಂಬುದು ಬಹಳ ಮುಖ್ಯ. ಎಂದಿಗೂ ಜೀವನದಲ್ಲಿ ಏನೇ ಕಷ್ಟ ಬಂದರೂ ಅದನ್ನು ಸಾಧಿಸಿದರೆ ಅದಕ್ಕೆ ಒಂದು ಅರ್ಥ ಸಿಗುತ್ತದೆ ಎಂದು ಅವರು ಹೇಳಿದರು.
ನಂತರ ಜಿಲ್ಲಾ ಪೋಲೀಸ್ ರಕ್ಷಣಾಧಿಕಾರಿ ಡಾ.ದಿವ್ಯಾ ಗೋಪಿನಾಥ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ನಾವು ಯಾವ ಸಮಯದಲ್ಲಿ ಏನೇ ಕೆಲಸ ಮಾಡಬೇಕಾದರು ತಾಳ್ಮೆ ಸಹನೆ ಬಹಳ ಮುಖ್ಯ. ವಿದ್ಯಾರ್ಥಿಗಳು ತಾಳ್ಮೆ ರೂಢಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ, ಎಲ್ಲಾ ಬೋಧಕ ವರ್ಗದ ಸಿಬ್ಬಂದಿ,ಬ್ರಹ್ಮಚೈತನ್ಯ ಸ್ಟೋರ್ನ ಮಾಲೀಕರಾದ ರಘುನಾಥ್.ಜಿ.ಎಚ್, ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.