ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಿಶ್ವ ಪಶುವೈದ್ಯರ ದಿನಾಚರಣೆ

Mainashree
Updated On : 27 Apr 2014, 12:11 pm

ಚಿಕ್ಕಬಳ್ಳಾಪುರ: ಕಳೆದ ವರ್ಷ ಜಿಲ್ಲಾದ್ಯಂತ ಕಾಲು ಬಾಯಿ ಜ್ವರ ಹರಡಿ ರಾಸುಗಳನ್ನು ಬಲಿ ತೆಗೆದುಕೊಂಡಿದ್ದು ಮತ್ತೆ ಕಾಲುಬಾಯಿ ಜ್ವರದಿಂದ ಅನಾಹುತಗಳು ಉಂಟಾಗದಿರಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ತಿಳಿಸಿದರು.
ತಾಲೂಕಿನ ಚದಲಪುರ ಕ್ರಾಸ್ ಬಳಿ ಇರುವ ಕೆನರಾ ಬ್ಯಾಂಕ್ ಸ್ವಯಂ ಉದ್ಯೋಗ ತರಬೇತಿ ಕೇಂದ್ರದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಪರಿಷತ್ತು, ಕರ್ನಾಟಕ ಪಶುವೈದ್ಯಕೀಯ ಸಂಘ ಆಯೋಜಿಸಿದ್ದ ವಿಶ್ವ ಪಶುವೈದ್ಯರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಾಯಿಗಳ ಹಾವಳಿಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ.  ಅಲ್ಲದೇ ಜಿಲ್ಲಾಸ್ಪತ್ರೆಗೆ ನಾಯಿ ಕಡಿತ ಪ್ರಕರಣಗಳು ಹೆಚ್ಚಿಗೆ ದಾಖಲಾಗುತ್ತಿದ್ದು ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜಾನುವಾರುಗಳ ರಕ್ಷಣೆಗೆ ಸಂಬಂಧಿಸಿ ಪಶು ವೈದ್ಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕೆಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೀಲಾಮಂಜುನಾಥ್ ಮಾತನಾಡಿ, ವೈದ್ಯರು ಪ್ರಾಮಾಣಿಕ ಸೇವಾ ಮನೋಭಾವನೆಯಿಂದ ಕೆಲಸ ಮಾಡಬೇಕೆಂದರು.
 ಪಶುಪಾಲನಾ ಮತ್ತು ವೈದ್ಯಸೇವಾ ಇಲಾಖೆ ಉಪನಿರ್ದೇಶಕ ಎಲ್. ಪ್ರಕಾಶ್ ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ಚಿಕ್ಕಬಳ್ಳಾಪುರ ಪಶು ಆಸ್ಪತ್ರೆ ಆವರಣದಲ್ಲಿ ಸುಮಾರು 100 ನಾಯಿಗಳಿಗೆ ಲಸಿಕೆ ಹಾಕಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಪಶುವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಟಿ. ಗೋವಿಂದಪ್ಪ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕ ಡಾ. ರವೀಂದ್ರ ಹೆಗ್ಗಡೆ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಎನ್. ಕವನ, ಕೆ.ಕೆ. ಪೊನ್ನಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement