ಕುಡಿವ ನೀರಿಗೆ ಆಗ್ರಹಿಸಿ ಪ್ರತಿಭಟನೆ
ಗುಡಿಬಂಡೆ: ತಾಲೂಕಿನ ಬೀಚಗಾನಹಳ್ಳಿ ಕ್ರಾಸ್‌ನಲ್ಲಿ 25 ದಿನಗಳಿಂದ ನೀರು ಪೂರೈಸುತ್ತಿಲ್ಲವೆಂದು ಆರೋಪಿಸಿ ಗ್ರಾಮದ ಮಹಿಳೆಯರು ಪಟ್ಟಣದ ಜಿಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಗ್ರಾಮದಲ್ಲಿ ಹಲವು ದಿನಗಳಿಂದ ನೀರಿನ ಅಭಾವ ಕಾಡುತ್ತಿದ್ದು, ಈ ಬಗ್ಗೆ ಗ್ರಾಪಂ ಕಚೇರಿ ಮುಂದೆ ಪ್ರತಿಭಟನೆ ಮಾಡಿದರೂ ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯತೆ ತೋರಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೇ ಗ್ರಾಮಕ್ಕೆ ಸಮರ್ಪಕ ವಿದ್ಯುತ್ ಮತ್ತು ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಒತ್ತಾಯಿಸಿದರು. ಈ ವೇಳೆ ಜೆ.ಪಿ ನಗರದ ಮಾರಪ್ಪ, ಪೆಮ್ಮರೆಡ್ಡಿ, ನಾರಾಯಣಸ್ವಾಮಿ, ಶ್ರೀನಿವಾಸ.ಆರ್, ಮಹದೇವಮ್ಮ, ನರಸಮ್ಮ, ವೆಂಕಟಮ್ಮ, ಗಂಗಮ್ಮ, ಆದಿಲಕ್ಷ್ಮಮ್ಮ, ಈಶ್ವರಮ್ಮ, ಲಕ್ಷ್ಮಮ್ಮ ಸೇರಿದಂತೆ ಗ್ರಾಮಸ್ಥರು ಇದ್ದರು.