ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜನರನ್ನು ಸತಾಯಿಸಬೇಡಿ: ಮಂಜೇಗೌಡ

Mainashree
Updated On : 29 Apr 2014, 12:47 pm

ಚಿಂತಾಮಣಿ: ಸಾರ್ವಜನಿಕರ ಮಾತಿಗೆ ಕಿಮ್ಮತ್ತು ನೀಡದ ಅಧಿಕಾರಿಗಳು ಯಾವುದೇ ಟೊಳ್ಳು ನೆಪವೊಡ್ಡಿ ಕಚೇರಿಗಳ ಸುತ್ತ ತಿರುಗಾಡಿಸುವುದು ಸರಿಯಲ್ಲ ಎಂದು ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿ ಮಂಜೇಗೌಡ ಕಂದಾಯ ಅಧಿಕಾರಿಗಳು ಹಾಗೂ ತಾಪಂ ಇಒ ವಸಂತಕುಮಾರ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದರು.
ಸೋಮವಾರ ನಗರದ ಪ್ರವಾಸ ಮಂದಿರದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆಗಳ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ ಮಾಡಿಕೊಡಬೇಕು ಎಂದು ತಿಳಿಸಿದರು. ತಾಲೂಕಿನ ಎಸ್.ರಾಗುಟ್ಟಹಳ್ಳಿಯಲ್ಲಿ ಉದ್ಯೋಗ ಖಾತ್ರಿಗೆ ಉಪಕರಣ ಸರಬುರಾಜು ಮಾಡಿದ ಗುತ್ತಿಗೆದಾರನಿಗೆ ಬಿಲ್ ನೀಡದೆ ಸತಾಯಿಸುತ್ತಿರುವ ಅಧಿಕಾರಿಗಳ ಬಗ್ಗೆ ಕಿಡಿಕಾರಿದ ಲೋಕಾಯುಕ್ತ ಅಧಿಕಾರಿ, ಇವರ ಮೇಲೆ ಕ್ರಿಮಿನಲ್ ಕೇಸ್ ಹೂಡ. ಕೃಷ್ಣನ ಜನ್ಮಸ್ಥಳಕ್ಕೆ ಹೋಗಲಿ ಎಂದು ಸಾರ್ವಜನಿಕರ ಎದುರು ತರಾಟೆಗೆ ತೆಗೆದುಕೊಂಡರು.
ನ್ಯಾಯ ಕೊಡಿಸಲು ಮನವಿ: ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಕೆ.ವಿ.ಮಂಜುನಾಥ್ ಅವರ ಪತ್ನಿ ನ್ಯಾಯ ಕೊಡಿಸಬೇಕು ಎಂದು ಕೋರಿ ಲೋಕಾಯುಕ್ತ ಅಧಿಕಾರಿಗೆ ದೂರು ನೀಡಿದರು. ಆತ್ಮಹತ್ಯೆ ಮಾಡಿಕೊಂಡ ಮಂಜುನಾಥ್ ಬರೆದಿದ್ದ ಡೆತ್‌ನೋಟ್ ಹಾಗೂ ಮನವಿ ಪತ್ರವನ್ನು ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement