ಬೆಟ್ಟದಲ್ಲಿ ಹೆಜ್ಜೇನು ದಾಳಿ
ಚಿಂತಾಮಣಿ: ಮೈಲಾಪುರ ಬೆಟ್ಟದಲ್ಲಿ ಹೆಜ್ಜೇನು ದಾಳಿಯಿಂದ ಹಲವರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಮೈಲಾಪುರ ಬೆಟ್ಟಕ್ಕೆ ಹಲವರು ಮೇವಿಗಾಗಿ ಬೆಟ್ಟಕ್ಕೆ ಹೋದಾಗ ಈ ಘಟನೆ ನಡೆದಿದೆ.
ಜೂಜು: ಐವರ ಬಂಧನ
ಚಿಂತಾಮಣಿ: ತಾಲೂಕಿನ ಬೊಮ್ಮೇಪಲ್ಲಿ ಗ್ರಾಮದ ನೀಲಗಿರಿ ತೋಪಿನಲ್ಲಿ ಸಂಜೆ ಅಂದರ್ ಬಾಹರ್ ಆಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿ, ಐವರನ್ನು ಬಂಧಿಸಿದ್ದಾರೆ. ಬಂಧಿತರಿಂದ 1600 ನಗದು ವಶಪಡಿಸಿಕೊಂಡಿದ್ದಾರೆ. ಬಟ್ಲಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿದ್ಯಾರ್ಥಿನಿ ಆತ್ಮಹತ್ಯೆ
ಶಿಡ್ಲಘಟ್ಟ: ಹೊಟ್ಟೆನೋವಿನಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘನಟೆ ವೇಲೂರು ಗ್ರಾಮದಲ್ಲಿ ನಡೆದಿದೆ. 16 ವರ್ಷದ ಶ್ರಾವಣಿ ಮೃತಪಟ್ಟ ವಿದ್ಯಾರ್ಥಿನಿ. ಕೆಲವು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ಆಕೆಯ ಪೋಷಕರು ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.