ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಎಲ್ಲ ವಾರ್ಡ್ಗಳಲ್ಲಿ ಬೋರ್ವೆಲ್

Mainashree
Updated On : 29 Apr 2014, 11:19 am

ಬಂಗಾರಪೇಟೆ: ಪಟ್ಟಣದ 23 ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಪ್ರತಿ ವಾರ್ಡಿನಲ್ಲಿ ಕೊಳವೆಬಾವಿ ಕೊರೆಯಿಸಲಾಗುವುದು  ಎಂದು ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ಹೇಳಿದರು.
ನಗರದಲ್ಲಿ ಕರೆಯಲಾಗಿದ್ದ ಪಿಡಿಒಗಳ ಸಭೆಯಲ್ಲಿ ಮಾತನಾಡಿದರು. ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಈ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಪುರಸಭೆ ಮುಖ್ಯಾಧಿಕಾರಿ ಜಹೀರ್ ಅಬ್ಬಾಸ್ ಅವರಿಂದ ಪಡೆದರು. ನೀರಿನ ಬವಣೆ ನೀಗಿಸಲು ಜಿಲ್ಲಾಧಿಕಾರಿಗಳೂಂದಿಗೆ ಚರ್ಚಿಸಿ, ಎಲ್ಲಾ ವಾರ್ಡ್ಗಳಲ್ಲಿ ಕೊಳವೆ ಬಾವಿ ಕೊರೆಯಿಸಲಾಗುವುದು ಎಂದು ತಿಳಿಸಿದರು. ಪಟ್ಟಣದ ಅತ್ತಿಗಿರಿಕೊಪ್ಪ ಕೆರೆಯಲ್ಲಿ ಕೊಳವೆಬಾವಿ ಕೊರೆಯಿಸಿ ನೀರು ಸರಬರಾಜಿಗೆ 2 ಕೋಟಿ ಅನುದಾನ ಬಿಡುಗಡೆಯಾಗಿದೆ. ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು. ನೀರು ಇಲ್ಲದಿರುವುದ ಮತ್ತು ವಿದ್ಯುತ್ ಸಮಸ್ಯೆಯಿಂದ ನೀರು ಪೂರೈಕೆಗೆ ವ್ಯತ್ಯಯವಾಗುತ್ತಿದೆ. ಹಾಗಾಗಿ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು ಎಂದು ಹೇಳಿದರು. ಪುರಸಭೆ ಅಧ್ಯಕ್ಷೆ ಗಂಗಮ್ಮ ರಂಗರಾಮಯ್ಯ, ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಉಪಾಧ್ಯಕ್ಷ ರಮೇಶ್, ಸದಸ್ಯರಾದ ಷಫಿ, ಪುರಸಭೆ ಮುಖ್ಯಾಧಿಕಾರಿ ಜಹೀರ್ ಅಬ್ಬಾಸ್, ವ್ಯವಸ್ಥಾಪಕ ಶ್ರೀನಿವಾಸಮೂರ್ತಿ, ತೀರ್ಥಪ್ರಸಾದ್, ಗೋವಿಂದರಾಜು ಮೊದಲಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement