ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ದಲಿತರ ಮೇಲಿನ ಹಲ್ಲೆಗೆ ಖಂಡನೆ

Mainashree
Updated On : 1 May 2014, 12:07 pm

ಬೆಂಗಳೂರು: ಕೋಲಾರ ಜಿಲ್ಲೆ ಚಿಂತಾಮಣಿ ತಾಲೂಕು ಸಿಂಗಸಂದ್ರ ಗ್ರಾಮದ ದಲಿತ ಕುಟುಂಬದವರ ಮೇಲೆ ಇತ್ತೀಚೆಗೆ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಡಾ.ಬಿ.ಆರ್.ಅಂಬೇಡ್ಕರ್ ಕರ್ನಾಟಕ ದಲಿತ್ ಹುಲಿಗಳು ಸಂಘದ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.
ಪುರಭವನದ ಮುಂದೆ ಪ್ರತಿಭಟನೆ ನಡೆಸಿದ ಅವರು, ದಲಿತರ ಮೇಲೆ ಹಲ್ಲೆ ಮಾಡಿದ ಪ್ರಭಾಕರ್ ಮತ್ತು ಇತರ ಸವರ್ಣೀಯರನ್ನು ಬಂಧಿಸಿ ಕಾನೂನು ರೀತಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಂಘದ ಅಧ್ಯಕ್ಷ ಕೆ.ವೆಂಕಟೇಶ್ ಮಾತನಾಡಿ, ರಾಜ್ಯದ ವಿವಿಧೆಡೆ ಇರುವ ದಲಿತರಿಗೆ ಹಾಗೂ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಬೇಕು. ಈ ಹಿಂದೆ ದಲಿತರ ಮೇಲೆ ಆಗಿರುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳ ಮೇಲೆ ಕ್ರಮಕೈಗೊಳ್ಳಬೇಕು.
ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ಜಾರಿಗೊಳಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ರಾಜ್ಯದಲ್ಲಿ ಕೋಮುವಾದಿಗಳ ಅಟ್ಟಹಾಸ ಮಿತಿಮೀರಿದೆ. ಇದರಿಂದ ದಲಿತರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸರ್ಕಾರ ಅಂತಹ ಸೂಕ್ಷ್ಮ ಸ್ಥಳಗಳನ್ನು ಗುರುತಿಸಿ ದಲಿತರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು. ಸಂಘದ ನೂರಾರು ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement