ರೈತರಿಗೆ ತೊಂದರೆ ನೀಡುವ ಉದ್ದೇಶವೇ?
ಕೆಜಿಎಫ್: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೆಸ್ಕಾಂ ಇಲಾಖೆ ವತಿಯಿಂದ ಸಮರ್ಪಕವಾಗಿ ವಿದ್ಯುತ್ ಪೂರೈಸುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕಳೆದ ಹತ್ತಾರು ವರ್ಷಗಳಿಂದ ಜಿಲ್ಲೆಯಲ್ಲಿ ಮಳೆಯಿಲ್ಲದೆ ಇರುವ ಅಲ್ಪಸ್ವಲ್ಪ ನೀರನ್ನು ರೈತರು ಕೃಷಿಕರು ಬೆಳೆಗಳನ್ನು ಬೆಳೆಯಲು ಪರದಾಡುವಂತಹ ಪರಿಸ್ಥಿತಿ ಇದೆ. ಬೆಸ್ಕಾಂ ಇಲಾಖೆ ಅಧಿಕಾರಿಗಳು ದಿನದಲ್ಲಿ ಹತ್ತಾರು ಭಾರಿ ವಿದ್ಯುತ್ ಕಡಿತಗೊಳಿಸುತ್ತಿದ್ದಾರೆ. ರೈತರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಬೆಸ್ಕಾಂ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ದುರಸ್ತಿಗೊಳಿಸಿ: ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಈ ಕೂಡಲೇ ಕ್ಷೇತ್ರದಲ್ಲಿ ದಿನಕ್ಕೆ ನಿರಂತರ 10 ಗಂಟೆಗಳ ಕಾಲ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು. ದುರಸ್ತಿಗೊಂಡಿರುವ ಟ್ರಾನ್ಸ್ಫಾರ್ಮರ್ಗಳನ್ನು ದುರಸ್ಥಿಗೊಳಿಸಬೇಕು, ಅಕ್ರಮ ಪಂಪ್ಸೆಟ್ಗಳು ಸಕ್ರಮಗೊಳಿಸಬೇಕು ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿದರು.