ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಮರ್ಪಕ ವಿದ್ಯುತ್ ವಿತರಣೆಗೆ ಭರವಸೆ

Rashmi Kasaragodu
Updated On : 5 Aug 2014, 12:29 pm

ಕೋಲಾರ/ಶ್ರೀನಿವಾಸಪುರ: ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ ಶ್ರೀನಿವಾಸಪುರದಲ್ಲಿ ಬಿಜೆಪಿಯಿಂದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎನ್. ಜಯರಾಮರೆಡ್ಡಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ  ಸರ್ಕಾರ ಸಮರ್ಪಕ ವಿದ್ಯುತ್ ಪೂರೈಕೆಗೆ ಗಮನ ನೀಡುತ್ತಿಲ್ಲವೆಂದರು. ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣಗೌಡ ಮಾತನಾಡಿ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸಿ ಜನಸಾಮಾನ್ಯರ ಜೀವನದೊಂದಿಗೆ ಚಲ್ಲಾಟವಾಡುತ್ತಿದೆ ಎಂದರು.
ಪ್ರತಿಭಟನಾಕಾರರು ಬೆಸ್ಕಾಂ ಕಚೇರಿಗೆ ನುಗ್ಗಿ ಎಇಇ ಶಿವರಾಮ್ಪುವರ್ ಅವರಿಗೆ ಮುತ್ತಿಗೆ ಹಾಕಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಿವರಾಂ ಪವರ್, ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಹೊದಲಿ ನಾರಾಯಣಸ್ವಾಮಿ, ನಂಜುಂಡೇಗೌಡ, ಬಲರಾಂ,ಪ್ರಭಾಕರ್, ವೆಂಕಟೇಶ್ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement