ಕೋಲಾರ

ನೌಕರರ ಸಮ್ಮೇಳನದಲ್ಲಿ ಭಾಗವಹಿಸಲು ಮನವಿ

ಗುಡಿಬಂಡೆ:  ಆ. 22ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ನೌಕರರು ಪಾಲ್ಗೊಳ್ಳಬೇಕೆಂದು ತಾಲೂಕು ಘಟಕದ ಅಧ್ಯಕ್ಷ ಕೆ.ವಿ. ನಾರಾಯಣ ಸ್ವಾಮಿ ಕೋರಿದ್ದಾರೆ.  ಪಟ್ಟಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಸಭೆಯಲ್ಲಿ ಭಾಗವಹಿಸಿದ ಬಳಿಕ ನೌಕರರನ್ನು ಉದ್ದೇಶಿಸಿ ಮಾತನಾಡಿದರು. ನೌಕರರ ಸಂಘದ ರಾಜ್ಯಾಧ್ಯಕ್ಷ ಭೈರಪ್ಪ ಮಾತನಾಡಿ, ನೌಕರರ ಹಲವಾರು ಬೇಡಿಕೆಗಳನ್ನು ಸರ್ಕಾರದ ಜೊತೆ ಸಂಘರ್ಷಕ್ಕಿಳಿಯದೆ ಸೌಹಾರ್ದಯುತವಾಗಿ ಬಗೆಹರಿಸಿದ್ದಾರೆ. 7ನೇ ವೇತನ ಆಯೋಗ ಜಾರಿ ಸೇರಿದಂತೆ ನೌಕರರ ಹಲವಾರು ಬೇಡಿಕೆಗಳು ಈಡೇರಿಲ್ಲ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲು ಸಮ್ಮೇಳನದಲ್ಲಿ ಒಗ್ಗಟ್ಟು ಪ್ರದರ್ಶಿಸುವ ಅಗತ್ಯವಿದೆ. ಆದ್ದರಿಂದ ತಾಲೂಕಿನ ಎಲ್ಲಾ ನೌಕರ ಬಂಧುಗಳು ಸಮ್ಮೇಳನದ ಪ್ರತಿನಿಧಿ ಶುಲ್ಕವನ್ನು ಪಾವತಿಸಿ, ಕಡ್ಡಾಯವಾಗಿ ಸಮ್ಮೇಳನದಲ್ಲಿ ಭಾಗವಹಿಸಬೇಕೆಂದು ಹೇಳಿದರು. ಈ ವೇಳೆ ನೌಕರರ ಸಂಘದ ಪದಾಧಿಕಾರಿಗಳಾದ ಎನ್. ನಾರಾಯಣ ಸ್ವಾಮಿ, ಮುನಿಕೃಷ್ಣ ಮತ್ತಿತರರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!