ಕೇಜ್ರಿವಾಲ್ ಆರೋಪಕ್ಕೆ ತಿರುಗೇಟು
ಕೋಲಾರ: ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಭ್ರಷ್ಟಾಚಾರ ನಿಯಂತ್ರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆಂಬ ವಿಶ್ವಾಸ ಈಗ ಹುಸಿಯಾಗಿದೆ, ಅಧಿಕಾರಕ್ಕೆ ಬಂದ ಹೊಸದರಲ್ಲೇ ಭಿನ್ನಮತ ಕಾಣಿಸಿಕೊಂಡಿದೆ, ಇದನ್ನು ಮರೆಮಾಚಲು ಗಿಮಿಕ್ ಮಾಡಲು ಹೊರಟಿದ್ದಾರೆಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ. ಶಿವಯೋಗಿಸ್ವಾವು ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಅವರು ವಿಧಾನಸಭಾ ಚುನಾವಣೆಯ ಮುನ್ನ ಕಾಂಗ್ರೆಸ್ ಇಲ್ಲವೇ ಬಿಜೆಪಿ ಜತೆ ಮೈತ್ರಿ ಇಲ್ಲ, ಬೇಕಾದರೆ ಮತ್ತೆ ಜನರ ಬಳಿ ಹೋಗುತ್ತೇನೆಂದು ಹೇಳಿ ಅಧಿಕಾರಕ್ಕಾಗಿ ಕಾಂಗ್ರೆಸ್ ಜತೆ ಕೈಜೋಡಿಸಿ ಮಾತು ಮರೆತಿದ್ದಾರೆ ಎಂದು ಆರೋಪಿಸಿದರು.