ಪರಮಶಿವಯ್ಯ ವರದಿ ಜಾರಿಗೆ ಜಿಲ್ಲಾ ಕಾಂಗ್ರೆಸ್ ಒತ್ತಾಯ
ಕೋಲಾರ: ಯುಪಿಎ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗಳಿಗೆ ತೆರಳಿ ಪ್ರಚಾರ ಮಾಡುವ ಜಾಗೃತಿ ಮೂಡಿಸಬೇಕೆಂದು ಎಐಸಿಸಿ ಕಾರ್ಯದರ್ಶಿ ಚೆಲ್ಲಾಕುಮಾರ್ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಅವರು ಶುಕ್ರವಾರ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಪ್ರತಿ ಕಾರ್ಯಕರ್ತ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಆಶಯದಂತೆ ಸಂಘಟನೆಗೆ ಒತ್ತು ನೀಡಿ ಮತ್ತೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಸಹಕಾರ ನೀಡಬೇಕೆಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯನ್ನು ನಡೆಸಲು ಅನುಮೋದನೆ ಪಡೆಯಲಾಯಿತು.