ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶ್ರದ್ಧೆಯಿಂದ ಕಲಿಯಲು ಮಕ್ಕಳಿಗೆ ಸಲಹೆ

Rashmi Kasaragodu
Updated On : 2 Feb 2014, 1:19 am


ಕೋಲಾರ: ಶಿಕ್ಷಣದಿಂದ ಜಗತ್ತಿನ ಯಾವುದೇ ಮೂಲವನ್ನು ತಲುಪಬಹುದು ಆದ್ದರಿಂದ ಚಿಕ್ಕ ವಯಸ್ಸಿನಲ್ಲಿ ವಿದ್ಯಾಭ್ಯಾಸವನ್ನು ಮೊಟಕುಗೊಳಿಸದೇ ಬಹಳ ಶ್ರದ್ಧೆಯಿಂದ ವಿದ್ಯಾಭ್ಯಾಸವನ್ನು ಮಾಡಿದರೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬಹುದೆಂದು ಶಿಕ್ಷಣ ಸಂಯೋಜಕ ಕೆ.ಎಂ. ಮುನಿಯಪ್ಪ ಅವರು ಅಭಿಪ್ರಾಯಪಟ್ಟರು. ಅವರು ತಾಲೂಕಿನ ಜಂಬಾಪುರದಲ್ಲಿ ನಡೆದ ಮದ್ದೇರಿ ಸಿ.ಆರ್.ಸಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳ ಕಲಿಕೋತ್ಸವದಲ್ಲಿ ಮಾತನಾಡಿದರು. ಜಿಲ್ಲಾ ನೌಕರರ ಸಂಘದ ಜಿಲ್ಲಾ ಪ್ರತಿನಿಧಿ ಎಂ. ಚಂದ್ರಪ್ಪ, ಎಸ್ಡಿಎಂಸಿ ಅಧ್ಯಕ್ಷ ಜೆ.ಎನ್. ಮಂಜುನಾಥ್, ವೆಂಕಟೇಶ್, ಮದ್ದೇರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸದಾಶಿವಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement