ತಾಲೂಕು ಮಟ್ಟದ ಯುವಜನ ಮೇಳ
ಕೋಲಾರ: ಇಂದಿನ ಯುವಕರು ಕಲೆ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಮುಂದೆ ಸಾಗಬೇಕು ಎಂದು ತಾಲೂಕು ಪಂಚಾಯ್ತಿ ಉಪಾಧ್ಯಕ್ಷರಾದ ಸರಸ್ವತಿ ಮುನಿಕೃಷ್ಣಪ್ಪನವರು ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಮುದುವತ್ತಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿ ಪಂ, ತಾಪಂ, ಯುವ ಸಬಲೀಕರಣ ಮತ್ತು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಬಾಲಾಜಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಲಾ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಕೋಲಾರ ತಾಲೂಕು ಮಟ್ಟದ ಯುವಜನ ಮೇಳ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಮುದುವತ್ತಿ ಗ್ರಾಪಂ ಅಧ್ಯಕ್ಷ ಅಶ್ವಥಮ್ಮ ವಹಿಸಿದ್ದರು.
ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಯಳಬುರ್ಗಿ ನಾರಾಯಣಸ್ವಾಮಿ ಮಾತನಾಡಿ, ಇಂದಿನ ಯುವಕರು ಕೆಟ್ಟಚಟಗಳಿಗೆ ದಾಸರಾಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದು, ಆರೀತಿ ಮಾಡದೇ ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಮುಂಬರುವ ದಿನಗಳಲ್ಲಿ ತಮ್ಮ ಜೀವನವನ್ನು ಸಾಕಾರಗೊಳಿಸಿಕೊಳ್ಳುವತ್ತ ದಾಪುಗಾಲು ಹಾಕಬೇಕಿದೆ ಎಂದು ಕರೆ ನೀಡಿದರು.