ಭದ್ರಾಚಲ ಶ್ರೀ ಸೀತಾರಾಮ ಕಲ್ಯಾಣೋತ್ಸವ
ಕೋಲಾರ: ಶ್ರೀನಿವಾಸಪುರದಲ್ಲಿ ಜನ್ಮಭೂಮಿ ವೇದಿಕೆಯಿಂದ ಭಾನುವಾರ ಹಮ್ಮಿಕೊಂಡಿದ್ದ ಭದ್ರಾಚಲ ಶ್ರೀ ಸೀತಾರಾಮ ಕಲ್ಯಾಣೋತ್ಸವ ಹಾಗೂ ಪಟ್ಟಾಭಿಷೇಕ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸೀತಾರಾಮ ಕಲ್ಯಾಣೋತ್ಸವ ವೀಕ್ಷಣೆ ಮಾಡಿ ಪುಳುಕಿತರಾದರು. ಕರ್ನಾಟಕ ಮಾತ್ರವಲ್ಲದೆ ಆಂಧ್ರ ಹಾಗೂ ತಮಿಳುನಾಡಿನಿಂದಲೂ ಭಕ್ತರು ಆಗಮಿಸಿದ್ದರು. ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ತಮ್ಮ ಪತ್ನಿಯೊಂದಿಗೆ ಬಂದು ದೇವರ ದರ್ಶನ ಪಡೆದರು. ಶಾಸಕ ರಮೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ವೈ. ನಾರಾಯಣಸ್ವಾಮಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ಮತ್ತಿತರರು ಹಣೆಗೆ ನಾಮ ಧರಿಸಿ ಎಲ್ಲರ ಗಮನ ಸೆಳೆದರು