ಜೀವನದಲ್ಲಿ ಜಿಗುಪ್ಸೆ; ಯುವಕ ಆತ್ಮಹತ್ಯೆ
ಚಿಂತಾಮಣಿ: ಜೀವನದಲ್ಲಿ ಬೇಸತ್ತು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯ ಶಿಂಗಸಂದ್ರ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಬುಕ್ಕನಹಳ್ಳಿ ಶಿಂಗಸಂದ್ರ ಗ್ರಾಮದ ಸುರೇಶ್ ಬಾಬು(22) ಕಳೆದ ಹಲವು ದಿನಗಳ ಹಿಂದೆ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಬೇಕರಿ ತೆರೆದು ವ್ಯಾಪಾರದಲ್ಲಿ ಆರ್ಥಿಕ ನಷ್ಟ ಉಂಟಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಸಂಬಂಧಿಕರು ಶಂಕೆ ವ್ಯಕ್ತಡಿಸಿದ್ದಾರೆ.
ಸಾವು-ಬದುಕಿನ ಜೊತೆ ಹೋರಾಟ ನಡೆಸುತ್ತಿದ್ದ ಈತನನ್ನು ಕೂಡಲೇ ನಗರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.