ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ದೊಡ್ಡಬಳ್ಳಾಪುರ: ತಾಲೂಕಿನ ಮಜರಾಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ವಿವೇಕಾನಂದನಗರ, ಚಿಕ್ಕತುಮಕೂರು ಸೇರಿದಂತೆ ವಿವಿಧೆಡೆ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಿನ ಸಮಗ್ರ ಅಭಿವೃದ್ಧಿ ಹಿತಾಸಕ್ತಿಯಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ವಿಶೇಷ ಅನುದಾನ ಸೇರಿದಂತೆ ಹಲವು ಇಲಾಖೆಗಳಿಂದ ಸಾಕಷ್ಟು ಅನುದಾನ ತರಲಾಗಿದೆ.