ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ: ಶಾಸಕ

Srinivasa Murthy VN
Updated On : 11 Feb 2014, 12:09 pm

ಚಿಂತಾಮಣಿ: ಗ್ರಾಮೀಣ ಜನರ ಸಮಸ್ಯೆಗಳಿಗೆ ಆದ್ಯತೆ ನೀಡಲಾಗುವುದೆಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಹೇಳಿದರು.
ತಾಲೂಕಿನ ಚನ್ನಕೇಶವಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುವರ್ಣ ಗ್ರಾಮ ಯೋಜನೆಯಡಿ ರು. 22.40 ಲಕ್ಷ ವೆಚ್ಚದ ಅನುದಾನದ ಸೀಮೆಂಟ್ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಸರ್ಕಾರದಿಂದ ಮಂಜೂರಾಗಿರುವ ರು. 5.89 ಕೋಟಿ ವೆಚ್ಚ ಅನುದಾನದಲ್ಲಿ ತಾಲೂಕಿನ 19 ಗ್ರಾಮಗಳಿಗೆ ಸುವರ್ಣ ಗ್ರಾಮ ಯೋಜನೆಯಡಿ ವಿವಿಧ ಮೂಲ ಸೌಕರ್ಯ ಕಲ್ಪಿಸಲಾಗುವುದೆಂದು ಹೇಳಿದರು.
ತಾಪಂ ಅಧ್ಯಕ್ಷೆ ಗೌರಮ್ಮನಾಗೇಶ್ ಮಾತನಾಡಿ, ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಂಡು ಗ್ರಾಮಗಳಲ್ಲಿ ಕೆಲಸ ನಿರ್ವಹಿಸುವ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಹೇಳಿದರು. ಇದಕ್ಕೂ ಮುನ್ನ ತಾಲ್ಲೂಕಿನ ಕೈವಾರ ಗ್ರಾಮದ ಶ್ರೀ ಯೋಗಿನಾರೇಯಣ ತಾತಯ್ಯನವರ ಮಠದ ರಸ್ತೆಗೆ ಪ್ರವಾಸೋಧ್ಯಮಿ ಇಲಾಖೆಯ ಅನುದಾನದ ರು. 60 ಲಕ್ಷ ವೆಚ್ಚದಲ್ಲಿ ಸೀಮೆಂಟ್ ರಸ್ತೆಗೆ ಹಾಗೂ ನಿಡಗುರ್ಕಿ ಗ್ರಾಮದಲ್ಲಿ ರು. 19.64 ಲಕ್ಷ ವೆಚ್ಚದಲ್ಲಿ ಸೀಮೆಂಟ್ ರಸ್ತೆಗೆ ಚಾಲನೆ ನೀಡಲಾಯಿತು.
ಕೋಮುಲ್ ನಿರ್ದೇಶಕ ಟಿ.ಎನ್. ರಾಜಗೋಪಾಲ್, ಎಪಿಎಂಸಿ ಸದಸ್ಯ ಸುಬ್ಬಾರೆಡ್ಡಿ, ಕೈಷ್ಣೇಗೌಡ ಇದ್ದರು.

ಶ್ರೀರಾಮ ಸೇನೆ ಕಾರ್ಯಕರ್ತರ ಪ್ರತಿಭಟನೆ
ಚಿಂತಾಮಣಿ: ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆ ಹಾಗೂ ಶೋಷಣೆ ವಿರುದ್ಧ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಆಜಾದ್ ಚೌಕಿನ ಶ್ರೀ ಹರಿಹರೇಶ್ವರಸ್ವಾಮಿ ದೇವಾಲಯದಿಂದ ಶ್ರೀರಾಮ ಸೇನೆಯ ನೂರಾರು ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ಶ್ರೀರಾಮ ಸೇನೆಯ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ ನಿಲ್ಲಬೇಕು. ಗೋಹತ್ಯೆ ನಿಷೇಧ ಕಡ್ಡಾಯವಾಗಿ ಪಾಲನೆ ಆಗಬೇಕು ಮತ್ತಿತರೆ ಬೇಡಿಕೆಗಳು ಈಡೇರಿಸಬೇಕೆಂದು ಆಗ್ರಹಿಸಿದರು. ನಂತರ ತಾಲೂಕು ದಂಡಾಧಿಕಾರಿ ಕೆ.ಟಿ. ಕೃಷ್ಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಶಿವಕುಮಾರ್, ನಾಗರಾಜ್, ಶ್ರೀಧರ್, ಗೋಪಾಲ್, ಸುಬ್ಬರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement