ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪ್ರಗತಿ ಪಥದಲ್ಲಿ ಚಿಕ್ಕಬಳ್ಳಾಪುರ; ಕೇಂದ್ರ ಸಚಿವ ಮೊಯ್ಲಿ

Srinivasa Murthy VN
Updated On : 15 Feb 2014, 11:43 am

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ಚುರುಕಾಗಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರ-ಗೌರಿಬಿದನೂರು ಮತ್ತು ಚಿಕ್ಕಬಳ್ಳಾಪುರ-ಬಾಗೇಪಲ್ಲಿ-ಪುಟ್ಟಪರ್ತಿ ರೇಲ್ವೆ ಮಾರ್ಗ ನಿರ್ಮಾಣಕ್ಕೆ ಚಾಲನೆ ದೊರೆಯಲಿದೆ ಎಂದು ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯ್ಲಿ ಭರವಸೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಆಯೋಜಿಸಿದ್ದ ತಾಲೂಕಿನಲ್ಲಿ ರು. 8 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ರು. 3 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋಟ್ಯಂತರ ರು.ಗಳನ್ನು ಜಿಲ್ಲೆಯ ಅಭಿವೃದ್ಧಿಗಾಗಿ ಬಿಡುಗಡೆ ಮಾಡುತ್ತಿದೆ. ಈಗಾಗಲೇ ಅನೇಕ ಯೋಜನೆಗಳನ್ನು ಘೋಷಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಿಕ್ಕಬಳ್ಳಾಪುರಕ್ಕೆ ಒಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ್ದಾರೆ. ಇಲ್ಲಿ 500 ಹಾಸಿಗೆಗಳ ಆಸ್ಪತ್ರೆಯನ್ನೂ ನಿರ್ಮಿಸಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆಯಿದ್ದು, ಇನ್ನೆರಡು ವರ್ಷದಲ್ಲಿ ಇಲಿನ್ಲ ನೀರಿನ ಸಮಸ್ಯೆ ನೀಗಲಿದೆ. ಈಗಾಗಲೇ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಟೆಂಡರ್ಗೆ ಅನುಮೋದನೆ ನೀಡಲಾಗಿದೆ. ಮುದ್ದೇನಹಳ್ಳಿಯಲ್ಲಿ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಕೇಂದ್ರ ಉದ್ಘಾಟನೆಯಾಗಿದ್ದು, ಮುದ್ದೇನಹಳ್ಳಿಯಲ್ಲಿ 10 ಎಕರೆ ಜಮೀನನ್ನು ಸರ್ಕಾರ ಗುರುತಿಸಿದೆ. ನಂದಿ ಗ್ರಾಮದ ಶ್ರೀ ಭೋಗನಂದೀಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ ತೈಲ ಕಂಪನಿಗಳು ಒಂಬತ್ತೂವರೆ ಕೋಟಿ ರು.ಗಳನ್ನು ನೀಡಿವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಾ.ಕೆ. ಸುಧಾಕರ್, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಜಿಲ್ಲೆ ಪ್ರಗತಿ ಪಥದಲ್ಲಿ ಸಾಗಿದೆ. ಜಿಲ್ಲೆಯಲ್ಲಿ ನೀರಿಗೆ ಹಾಹಾಕಾರ ಏರ್ಪಟ್ಟಿರುವ ಸಂದರ್ಭದಲ್ಲಿ ಎತ್ತಿನಹೊಳೆ ಕಾಮಗಾರಿ ಶೀಘ್ರವಾಗಿ ಆರಂಭಗೊಳ್ಳಬೇಕು, ಇಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯನ್ನು ತ್ವರಿತವಾಗಿ ನಿರ್ಮಾಣ ಮಾಡಬೇಕು. ಪ್ರಮುಖವಾಗಿ ಬೆಂಗಳೂರಿಗೆ ಸಮೀಪದ ಚಿಕ್ಕಬಳ್ಳಾಪುರವನ್ನು ಮಾದರಿ ಉಪ ನಗರವನ್ನಾಗಿ ಘೋಷಿಸಿ ಅಭಿವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಹೆಚ್ಚಿಗೆ ಕೈಗಾರಿಕೆಗಳನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿದರು. ಜಿಪಂ ಅಧ್ಯಕ್ಷ ಚಿನ್ನಪ್ಪ, ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್, ಮುಖ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement