ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಕುರಿ, ಮೇಕೆಗೆ ಲಸಿಕೆ ಹಾಕಿಸುವಲ್ಲಿ ನಿರ್ಲಕ್ಷ್ಯ ಸಲ್ಲದು'

Srinivasa Murthy VN
Updated On : 17 Feb 2014, 12:10 pm

ಬಾಗೇಪಲ್ಲಿ: ರೈತರು ಕಾಲುಬಾಯಿ ಜ್ವರವನ್ನು ನಿಯಂತ್ರಿಸಲು ಹಸುಗಳಿಗೆ ಮಾತ್ರ ಲಸಿಕೆಯನ್ನು ಹಾಕಿಸುತ್ತಾರೆ. ಎತ್ತು, ಕುರಿ ಮತ್ತು ಮೇಕೆಯಂತಹ ಜಾನುವಾರುಗಳಿಗೆ ಲಸಿಕೆ ಹಾಕಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದು ಇದು ಸರಿಯಲ್ಲ ಎಂದು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ವಿ.ಮಂಜುನಾಥರೆಡ್ಡಿ ಹೇಳಿದರು.
ತಾ. ಪರಗೋಡು ಗ್ರಾಪಂ ವ್ಯಾಪ್ತಿಯ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ  ಪಶು ಸಂಗೋಪನಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಸುಗಳಿಗೆ ಉಚಿತವಾಗಿ ಕಾಲುಬಾಯಿ ಜ್ವರ ನಿರೋಧಕ ಲಸಿಕೆ ಹಾಕುವ 6ನೇ ಸುತ್ತಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಹುತೇಕ ರೈತರು ಹಸುಗಳಿಗೆ ಲಸಿಕೆ ಹಾಕಿಸುವುದರಿಂದ ಗಡ್‌ಡೆ ಬರುತ್ತೆ, ಹಾಲು ಕಮ್ಮಿ ನೀಡುತ್ತೆ ಹಾಗೂ ಅಡ್ಡ ಪರಿಣಾಮ ಬೀರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಲಸಿಕೆಯನ್ನು ಹಾಕಿಸಲು ಮುಂದೆ ಬರುತ್ತಿಲ್ಲ. ಹಸುಗಳಿಗೆ ಲಸಿಕೆ ಹಾಕಿಸುವುದರಿಂದ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಕಡ್ಡಾಯವಾಗಿ ಲಸಿಕೆಯನ್ನು ಹಸುಗಳಿಗೆ ಹಾಕಿಸುವುದರಿಂದ ಕಾಲು ಬಾಯಿ ಜ್ವರವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.
ರಾಜ್ಯದಲ್ಲಿ ಸಾವಿರಾರು ಹಸುಗಳು ಕಾಲುಬಾಯಿ ಜ್ವರದಿಂದ ಮೃತಪಟ್ಟು ರೈತರು ಕಷ್ಟವನ್ನು ಅನುಭವಿಸುತ್ತಿರುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಒಕ್ಕೂಟದಿಂದ ಕಾಲುಬಾಯಿ ಜ್ವರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವರ್ಷಕ್ಕೆ ಎರಡು ಬಾರಿ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ತಾಲೂಕಿನಲ್ಲಿ ಕಾಲುಬಾಯಿ ಜ್ವರಕ್ಕೆ ಸುಮಾರು 150-200 ಹಸುಗಳು ಬಲಿಯಾಗಿವೆ.  ಕಾಲು ಬಾಯಿ ಜ್ವರ ಒಂದರಿಂದ ಇನ್ನೊಂದಕ್ಕೆ ಗಾಳಿಯ ಮೂಲಕ ಹರಡುವಂತಹ ಕಾಯಿಲೆಯಾಗಿದ್ದು ಈ ಜ್ವರಕ್ಕೆ ಯಾವುದೇ ರೀತಿಯ ಚಿಕಿತ್ಸೆಯಿಲ್ಲ.ಈ ಜ್ವರವನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಹಸು ಸೇರಿದಂತೆ ಎಲ್ಲಾ ರೀತಿಯ ಜಾನುವಾರುಗಳಿಗೂ ಲಸಿಕೆಯನ್ನು ಕಡ್ಡಾಯ ಹಾಕಿಸುವುದರಿಂದ ಕಾಲುಬಾಯಿ ಜ್ವರವನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ ಎಂದು ನುಡಿದರು.
ಜಿಪಂ ಮಾಜಿ ಉಪಾಧ್ಯಕ್ಷೆ ಬಿ.ಸಾವಿತ್ರಮ್ಮ, ತಾಪಂ ಸದಸ್ಯ ಗೋಪಾಲಕೃಷ್ಣ, ಗ್ರಾಪಂ ಸದಸ್ಯ ನಾಗಿರೆಡ್ಡಿ, ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷೆ ವೆಂಕಟಲಕ್ಷ್ಮಮ್ಮ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement