ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಪಘಾತದಲ್ಲಿ ಬೈಕ್ ಸವಾರ ಸಾವು

Rashmi Kasaragodu
Updated On : 18 Feb 2014, 2:35 am

ಚಿಂತಾಮಣಿ: ರಸ್ತೆಬದಿ ನಿಂತಿದ್ದ ಸರಕು ಸಾಗಾಣಿಕೆ ಲಾರಿಗೆ ಹಿಂಬದಿಯಿಂದ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗ್ರಾಮಾಂತರ ತಳಗವಾರ ಗ್ರಾಮದ ಬಳಿ ನಡೆದಿದೆ.
ಚಿಂತಾಮಣಿ-ಬೆಂಗಳೂರು ಮಾರ್ಗದ ತಳಗವಾರ ಗ್ರಾಮದ ರಸ್ತೆಬದಿ ನಿಂತಿದ್ದ ಸರಕು ಸಾಗಾಣಿಕೆ ಲಾರಿಗೆ ತಾಲೂಕಿನ ಕಾಪ್ಪಲ್ಲಿ ಗ್ರಾಮದ ವೆಂಕಟರೆಡ್ಡಿ(25) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ವೆಂಕಟೇಶಮೂರ್ತಿ ಸ್ಥಳ ಪರಿಶೀಲಿಸಿ ನಂತರ ವಾಹನಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಮನೆಯಲ್ಲಿ ಕಳವು
ನಗರದ ಹೊರ ವಲಯದ ಆಂಜಪ್ಪ ಎಂಬವರ ಮನೆಯ ಮುಂಭಾಗದ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಬೀರುವದಲ್ಲಿದ್ದ ಸುಮಾರು 80 ಗ್ರಾಂ ಚಿನ್ನಾಭರಣ ಹಾಗೂ 4 ಸಾವಿರ ರುಪಾಯಿ ನಗದು ದೋಚಿ ಪರಾರಿಯಾಗಿರುವುದಾಗಿ ಮನೆ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement