ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ತಾಲೂಕು ಕೇಂದ್ರಕ್ಕೆ ಆಗ್ರಹಿಸಿ ಬೇತಮಂಗಲ ಬಂದ್

Rashmi Kasaragodu
Updated On : 18 Feb 2014, 2:36 am

ಕೆಜಿಎಫ್: ಬೇತಮಂಗಲವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಹಾಗೂ ಮೂಲ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ತಾಲೂಕು ಹೋರಾಟ ಸಮಿತಿ ಕರೆ ನೀಡಿದ್ದ ಬಂದ್ ಯಶಸ್ವಿಯಾಗಿದೆ.
ಬಂಗಾರಪೇಟೆ ತಾಲೂಕಿನಲ್ಲಿ 2 ವಿಧಾನಸಭಾ ಕ್ಷೇತ್ರಗಳಿದ್ದು ಕೆಜಿಎಫ್ ವಿಧಾನಸಭಾ ಕ್ಷೇತ್ರದ ಹೋಬಳಿ ಕೇಂದ್ರ ಬೇತಮಂಗಲ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಕರೆ ನೀಡಿದ್ದ ಬಂದ್ಗೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು, ಬಸ್ ಆಟೋ ಸೇರಿದಂತೆ ಇತರೆ ವಾಹನ ಸಂಚಾರ ಸ್ಥಗಿತಗೊಂಡಿದ್ದವು.
ಬೇತಮಂಗಲ ತಾಲೂಕು ಹೋರಾಟ ಸಮಿತಿ ಹಾಗೂ ಇತರೆ ಸಂಘ ಸಂಸ್ಥೆಗಳು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಕೂಡಲೇ ಸರ್ಕಾರ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ವಂಕಟರಾಮೇಗೌಡ, ಈ ಬಾಗದ ರೈತರು, ಕಾರ್ಮಿಕರು ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಪ್ರತಿಕ್ರಿಯೆ ಬಂದಿಲ್ಲ. ಬ್ರಿಟೀಷರ ಆಳ್ವಿಕೆ ಕಾಲದಿಂದಲೂ ಬೇತಮಂಗಲ ತಾಲೂಕು ಕೇಂದ್ರವಾಗಿತ್ತು ಎಂಬುದಕ್ಕೆ ದಾಖಲೆಗಳಿವೆ ಎಂದರು. ಕೂಡಲೇ ಸರ್ಕಾರ ಬೇತಮಂಗಲವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿ ಬಂಗಾರಪೇಟೆ ತಹಸೀಲ್ದಾರ್ ಉಷಾ ಅವರಿಗೆ ಮನವಿ ಸಲ್ಲಿಸಿದರು. ಬಂದ್ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡಿದ್ದವು. ಆದರೆ ಪ್ರವಾಸಕ್ಕೆ ಹೊರಟ್ಟಿದ್ದ ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ ಬಸ್ವೊಂದು ಬೇತಮಂಗಲ ಪ್ರವೇಶಿಸುತ್ತಿದ್ದಂತೆ ಪ್ರತಿಭಟನಾಕಾರರು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿ, ಬಸ್ ಚಾಲಕನ ಮೇಲೆ ಹಲ್ಲೆಗೆ  ಮುಂದಾದಾಗ ಸ್ಥಳಕ್ಕಾಗಮಿಸಿದ ಬೇತಮಂಗಲ ಠಾಣಾ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಬಸ್ ಹೋಗಲು ವ್ಯವಸ್ಥೆ ಮಾಡಿದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಗಂಭೀರ ವಾತಾವರಣ ಉಂಟಾಗಿತ್ತು.
ಪ್ರತಿಭಟನೆಯಲ್ಲಿ, ಕರವೇ ಗ್ರಾಮೀಣ ಅಧ್ಯಕ್ಷ ಕೋದಂಡರಾಮಯ್ಯ, ಬೇತಮಂಗಲ ತಾಲೂಕು ಹೋರಾಟ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು, ವಿವಿಧ ಸಂಘಟನೆಗಳ ಮುಖಂಡರು, ಬೇತಮಂಗಲ ಹಾಗೂ ಕ್ಯಾಸಂಬಳ್ಳಿ ಹೋಬಳಿಗಲ ಗ್ರಾಮಸ್ಥರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement