ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವೇತನಕ್ಕೆ ಒತ್ತಾಯಿಸಿ ಶಿಕ್ಷಕರ ಧರಣಿ

Rashmi Kasaragodu
Updated On : 18 Feb 2014, 2:35 am

ಮುಳಬಾಗಲು: ಕೋಲಾರ ಜಿಲ್ಲೆಯಲ್ಲಿ ಶಿಕ್ಷಕರನ್ನು ಅಮಾನೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಮಂಜುನಾಥ್ ಆರೋಪಿಸಿದರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಸೋಮವಾರ ಶಿಕ್ಷಕರಿಂದ ನಡೆದ  ಪ್ರತಿಭಟನೆಯಲ್ಲಿ ಮಾತನಾಡಿ, ಶಿಕ್ಷಕರ ಸಂಬಳ ನೀಡಲು ನಿರ್ಲಕ್ಷ್ಯವಹಿಸುವ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ. ಜಗನ್ನಾಥ್, ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಶಿಕ್ಷಕರಿಗೆ ಪ್ರತಿ ತಿಂಗಳು 5ರೊಳಗೆ ಸಂಬಳ ಹಾಗೂ ಇತರೆ 21 ಬೇಡಿಕೆಗಳನ್ನು ಈಡೇರಿಸಲು ಕೋರಿದರು.
ಪ್ರತಿಭಟನೆಯಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಎಂ. ವೆಂಕಟರವಣಪ್ಪ, ರಾಜಕುಮಾರ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಶಿವಣ್ಣ, ಶಂಕರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement