ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶೆಟ್ಟಹಳ್ಳಿ ಗ್ರಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ

Rashmi Kasaragodu
Updated On : 19 Feb 2014, 2:04 am

ಚಿಂತಾಮಣಿ: ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಕಾರ್ಯವೈಖರಿ ವಿರುದ್ಧ 10 ಸದಸ್ಯರು ಅವಿಶ್ವಾಸ ಮಂಡನೆ ಮಾಡಲಾಯಿತು.
ತಾಲೂಕಿನ ಅಂಬಾಜಿದುರ್ಗ ಹೋಬಳಿ ಶೆಟ್ಟಹಳ್ಳಿ ಗ್ರಾಪಂ ಕಾರ್ಯಾಲಯದಲ್ಲಿ ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲಾ ಉಪ ವಿಭಾಗಾಧಿಕಾರಿ ಶಾಂತಲಾ ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿ ವಸಂತ್ಕುಮಾರ್ ಸಮಕ್ಷದಲ್ಲಿ 15 ಗ್ರಾಪಂ ಸದಸ್ಯರ ಪೈಕಿ 10 ಸದಸ್ಯರು ಹಾಜರಾಗಿ ಹಾಲಿ ಗ್ರಾಪಂ ಅಧ್ಯಕ್ಷ ವೆಂಕಟಲಕ್ಷ್ಮಮ್ಮ ಕೋಂ ನಾರೆಪ್ಪ ಎಂಬವರ ಕಾರ್ಯವೈಖರಿ ವಿರುದ್ಧ ಅವಿಶ್ವಾಸ ಮಂಡಿಸಿದರು.
ಈ ಎಲ್ಲ ವಿದ್ಯಮಾನಗಳ ಬಗ್ಗೆ ಹಲವು ಮುಖಂಡರು ಹಾಗೂ ಗ್ರಾಮಸ್ಥರು ತೀವ್ರ ಕುತೂಹಲದಿಂದ ಪಂಚಾಯ್ತಿ ಕಾರ್ಯಾಲಯದ ಮುಂಭಾಗದಲ್ಲಿ ಎದುರು ನೋಡುವ ಪರಿಸ್ಥಿತಿ ಉದ್ಭವಗೊಂಡಿತು.
ನಂತರ ಜಿಲ್ಲಾ ಉಪ ವಿಭಾಗಾಧಿಕಾರಿ ಶಾಂತಲಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಅಧ್ಯಕ್ಷರ ಸ್ಥಾನ ತುಂಬುವವರೆಗೂ ಉಪಾಧ್ಯಕ್ಷರು ಅಧ್ಯಕ್ಷ ಸ್ಥಾನವನ್ನು ನಿಭಾಯಿಸಲು ಸೂಚಿಸಿದ್ದಾರೆ. ಈ ವೇಳೆ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಾರಾಯಣಸ್ವಾಮಿ ಹಾಗೂ ಇನ್ನೂ ಹಲವು ಸದಸ್ಯರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement