ರಾಜ್ಯ ಸರ್ಕಾರದ ಕಾರ್ಯವೈಖರಿ ವಿರೋಧಿಸಿ ಪ್ರತಿಭಟನೆ
ಚಿಂತಾಮಣಿ: ವಿದ್ಯಾರ್ಥಿಗಳ ಶುಲ್ಕ ವಿನಾಯಿತಿ ಸೌಲಭ್ಯದಿಂದ ದೂರವಿಡುವ ರಾಜ್ಯ ಸರ್ಕಾರದ ಕಾರ್ಯವೈಖರಿ ವಿರೋಧಿಸಿ ಎಬಿವಿಪಿಯಿಂದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಗರದ ಪ್ರವಾಸಿ ಮಂದಿರದಿಂದ ನೂರಾರು ವಿದ್ಯಾರ್ಥಿಗಳು ಮುಖ್ಯ ಬೀದಿಗಳಲ್ಲಿ ಸಂಚರಿಸಿ ಬಿ.ಸಿ.ಎಂ ವಿದ್ಯಾರ್ಥಿಗಳನ್ನು ಶುಲ್ಕ ವಿನಾಯಿತಿ ಸೌಲಭ್ಯದಿಂದ ದೂರವಿಡುವ ಸರ್ಕಾರದ ಕ್ರಮ ಖಂಡಿಸಿದರು.
ರಾಜ್ಯ ಸರ್ಕಾರ ಜಾರಿಗೆ ಕಳುಹಿಸಿರುವ ಈ ಕಾಯಿದೆ ರಾಜ್ಯದ ಬಡ ಗ್ರಾಮೀಣ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ನೇರ ದುಷ್ಪರಿಣಾಮವಾಗಲಿದೆ ಎಂದು ಆರೋಪಿಸಿ ಸುಮಾರು 1 ತಾಸಿನ ಕಾಲ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ನಂತರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ತಾಲೂಕು ದಂಡಾಧಿಕಾರಿ ಕೆ.ಟಿ. ಕೃಷ್ಣಸ್ವಾಮಿ ರವರಿಗೆ ಮನವಿ ಸಲ್ಲಿಸಿದರು. ಎಬಿವಿಪಿ ಮುಖಂಡರಾದ ಸುರೇಶ್, ನವಾಜ್, ಮಂಜುನಾಥ್, ಶ್ರೀನಿವಾಸ, ಸತ್ಯನಾರಾಯಣ ಇದ್ದರು.