ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಪ್ರತಿಭಟನೆ

Rashmi Kasaragodu
Updated On : 21 Feb 2014, 1:38 am

ಕೆಜಿಎಫ್: ಶುಲ್ಕ ವಿನಾಯಿತಿ ವಿಚಾರದಲ್ಲಿ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಯಿಂದ ನಾಡ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ಹಿಂದೆ ಬಿಸಿಎಂ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಶುಲ್ಕ ವಿನಾಯಿತಿ ರದ್ದಾಗಲಿದ್ದು, ವಿದ್ಯಾರ್ಥಿಗಳು ಪೂರ್ಣ ಶುಲ್ಕವನ್ನು ಪಾವತಿಸುವ ಪರಿಸ್ಥಿತಿ ಎದುರಾಗಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಸಂಚಾಲಕ ಸುನೀಲ್ಕುಮಾರ್, ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಈ ಕಾಯ್ದೆ ರಾಜ್ಯದ ಬಡ ಗ್ರಾಮೀಣ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ನೇರ ದುಷ್ಪರಿಣಾಮವಾಗಲಿದ್ದು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು. ಪದವಿ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಮೂರು ತಿಂಗಳು ಕಳೆಯುತ್ತಿದ್ದರೂ ಫಲಿತಾಂಶವನ್ನು ಪ್ರಕಟಿಸದೇ ಇರುವುದನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತಿದ್ದು ಕೂಡಲೇ ಫಲಿತಾಂಶ ಪ್ರಕಟಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳುವುದಾಗಿ ತಿಳಿಸಿದರು. ವಿದ್ಯಾರ್ಥಿ ವಿರೋಧಿ ನಿಲುವನ್ನು ಹಿಂಪಡೆದು ರಾಜ್ಯದ ವಿದ್ಯಾರ್ಥಿ ಸಮುದಾಯದ ಕ್ಷಮೆ ಕೇಳಬೇಕು ಎಂಬ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಉಪತಹಸೀಲ್ದಾರ್ ಇನಾಯತ್ತುಲ್ಲಾಖಾನ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ತಾಲೂಕು ಸಂಚಾಲಕ ನವೀನ್ರೆಡ್ಡಿ, ನಗರ ಕಾರ್ಯದರ್ಶಿ ಸುಬ್ರಮಣಿ, ಭರತ್, ನಾಗೇಶ್, ಶಿವರಾಜ್, ಮಹೇಶ್, ಜಯರಾಮರೆಡ್ಡಿ, ನವೀನ್, ಅನಿಲ್, ಅಶೋಕ್, ಮಲ್ಲಿಕಾರ್ಜುನ ಸೇರಿದಂತೆ ಇತರೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ರೈಲು ಹತ್ತಲು ಹೋಗಿ ಗಾಯ
ಕೆಜಿಎಫ್: ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಆಯಾತಪ್ಪಿ ಕೆಳಗೆ ಬಿದ್ದ ಪರಿಣಾಮ ರೈಲಿನ ಚಕ್ರದಡಿ ಸಿಲುಕಿ ಎರಡೂ ಕಾಲುಗಳು ಮುರಿದುಕೊಂಡಿರುವ ಘಟನೆ ನಗರದ ಉರಿಗಾಂ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ರಾಬರ್ಟ್ಸನ್ಪೇಟೆ ಠಾಣಾ ವ್ಯಾಪ್ತಿಯ ನಿವಾಸಿ ರಾಬರ್ಟ್(60) ಎಂಬುವರು ಬೆಂಗಳೂರಿಗೆ ಕೆಲಸಕ್ಕೆ ಹೋಗಲು ಮಧ್ಯಾಹ್ನ 1.30ರ ಸಮಯದಲ್ಲಿ ಉರಿಗಾಂ ರೈಲ್ವೆ ನಿಲ್ದಾಣದಲ್ಲಿ ಟಿಕೆಟ್ ಪಡೆದು ಬಂಗಾರಪೇಟೆ ಕಡೆಯಿಂದ ಬರುತ್ತಿದ್ದ ಮಾರಿಕುಪ್ಪಂ ನಿಂದ ಬೆಂಗಳೂರು ಸಿಟಿಗೆ ಹೋಗುವ ಸ್ವರ್ಣ ಪ್ಯಾಸೆಂಜರ್ ರೈಲನ್ನು ಹತ್ತಲು ಹೋದಾಗ ಈ ದುರಂತ ಸಂಭವಿಸಿದೆ. ಅವರನ್ನು ಕೂಡಲೇ ಸ್ಥಳಿಯರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಂಗಾರಪೇಟೆ ರೈಲ್ವೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉರಿಗಾಂ ರೈಲ್ವೆ ನಿಲ್ದಾಣಕ್ಕೆ ಭೇಟಿ ಮೀಡಿ ಪರಿಶೀಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement