23ಕ್ಕೆ ಶ್ರೀನಿವಾಸ ಕಲ್ಯಾಣೋತ್ಸವ
ಬಂಗಾರಪೇಟೆ: 23 ರಂದು ಪಟ್ಟಣದ ಜೈನ್ ಶಾಲೆ ಆವರಣದಲ್ಲಿ ತಿರುಮಲ ತಿರುಪತಿ ಶ್ರೀವೆಂಕಟೇಶ್ವರ ಸ್ವಾಮಿಯ ಶ್ರೀನಿವಾಸ ಕಲ್ಯಾಣೋತ್ಸವ ಹಮ್ಮಿಕೊಳ್ಳಾಗಿದೆ ಎಂದು ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.
ಕಲ್ಯಾಣೋತ್ಸವ ಸಿದ್ಧತೆಗಳ ಬಗ್ಗೆ ಸ್ಥಳ ಪರಿಶೀಲಿಸಿದ ನಂತರ ಮಾತನಾಡಿ, ಲೋಕ ಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಸುತ್ತಿದ್ದು, 23ರ ಬೆಳಗ್ಗೆ ಎಸ್.ಎನ್.ಚಾರಿಟೆಬಲ್ ಟ್ರಸ್ಟ್ನಿಂದ ಉಚಿತ ಸಾಮೊಹಿಕ ವಿವಾಹ, ಕಾರ್ಯಕ್ರಮಕ್ಕೆ ಬರುವ ಭಕ್ತಾಧಿಗಳಿಗೆ ಅನ್ನದಾನ ನಡೆಯಲಿದೆ ಎಂದರು.
ಕಲ್ಯಾಣೋತ್ಸವ ನಂತರ ಭಕ್ತಾಧಿಗಳಿಗೆ ತಿರುಪತಿಯ ಲಾಡು, ಕ್ಯಾಲೆಂಡರ್ ಪ್ರಸಾದವಾಗಿ ಕೊಡಲಾಗುವುದು. ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಸಚಿವರಾದ ಪ್ರಕಾಶ್ ಉಕ್ಕೇರಿ, ಆರ್.ವಿ. ದೇಶಪಾಂಡೆ, ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ಸಿ.ಜೆ. ರಾಯ್ ಭಾಗವಹಿಸಲಿದ್ದಾರೆಂದು ತಿಳಿಸಿದರು. ಪುರಸಭೆ ಮಾಜಿ ಅಧ್ಯಕ್ಷ ಕೆ. ಚಂದ್ರಾರೆಡ್ಡಿ, ಎಂ. ಚಂದು ಇದ್ದರು.