ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆರಸಪ್ರಶ್ನೆ ಸ್ಪರ್ಧೆಗೆ ಆಹ್ವಾನ

Rashmi Kasaragodu
Updated On : 22 Feb 2014, 2:11 am

ಚಿಂತಾಮಣಿ: ತಾಲೂಕಿನ ಪ್ರೌಢಶಾಲೆಗಳ 10 ನೇ ತರಗತಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಈ ಸದಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಡಿಲಿಜಿಯನ್ ಸಂಯುಕ್ತ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಎಂ.ಆರ್. ಅಂಬಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಡಿಲಿಜಿಯನ್ ಸಂಯುಕ್ತ ಪ್ರೌಢಶಾಲೆಯ ಆವರಣದಲ್ಲಿ ಫೆ.25 ರಂದು ಬೆಳಿಗ್ಗೆ 10 ಗಂಟೆಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಶಾಲೆಗೆ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ. ವಿವರಗಳಿಗಾಗಿ ಎಲ್. ಕಾಳಿದಾಸ್ 8904938284 ಸಂಪರ್ಕಿಸಲು ಕೋರಿದ್ದಾರೆ.
ಹೋಬಳಿ ಸಮಾವೇಶ: ತಾಲೂಕಿನ ಚಿಲಕಲನೇರ್ಪು ಹೋಬಳಿ ವಕ್ಕಲಿಗರ ಹಿತ ರಕ್ಷಣಾ ವೇದಿಕೆಯಿಂದ 23 ರ ಮಧ್ಯಾಹ್ನ 12 ಗಂಟೆಗೆ ಕೆಂಚಾರ್ಲಹಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ವಕ್ಕಲಿಗರ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ವಕ್ಕಲಿಗ ಸಮುದಾಯದ ರಾಮಚಂದ್ರಾರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement