ಮೂಲ ಸೌಲಭ್ಯಕ್ಕೆ ಆದ್ಯತೆ: ಶಾಸಕ ಜೆ.ಕೆ. ಕೃಷ್ಣಾರೆಡ್ಡಿ
ಚಿಂತಾಮಣಿ: ಕ್ಷೇತ್ರದ ಎಲ್ಲಾ ಗ್ರಾಮೀಣ ಪ್ರದೇಶಗಳಿಗೂ ಮೂಲ ಸೌಲಭ್ಯ ಕಲ್ಪಿಸಲಾಗುವುದೆಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಭರವಸೆ ನೀಡಿದರು.
ತಾಲೂಕಿನ ಕರಿಯಪ್ಪಲ್ಲಿ, ಊಲವಾಡಿ, ದೊಡ್ಡಗಂಜೂರು,ಚಿಕ್ಕಪುರ, ದೊಡ್ಡಪುರ ಮತ್ತಿತರ ಗ್ರಾಮಗಳಲ್ಲಿ ಶುಕ್ರವಾರ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಕ್ಷೇತ್ರ ಪ್ರವಾಸ ಕೈಗೊಂಡು ರಸ್ತೆ, ಸಿಮೆಂಟ್ ರಸ್ತೆ, ಚರಂಡಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಟಿ.ಎನ್. ರಾಜಗೋಪಾಲ್, ದೊಡ್ಡಬೊಮ್ಮನಹಳ್ಳಿ ವೆಂಕಟರೆಡ್ಡಿ, ಚನ್ನರಾಯಪ್ಪ, ಉಪಾಧ್ಯಕ್ಷ ರಾಚಾಪುರ ಶ್ರೀನಿವಾಸ್ ಇದ್ದರು.