ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅನಧಿಕೃತ ಕ್ಲಿನಿಕ್‌ಗಳ ಮೇಲೆ ದಾಳಿ

Mainashree
Updated On : 23 Feb 2014, 10:57 am

ಬಾಗೇಪಲ್ಲಿ: ಅನಧಿಕೃತ ಕ್ಲಿನಿಕ್‌ಗಳ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಗಳ ನೇತೃತ್ವದ ತಂಡ ಅನಿರೀಕ್ಷಿತ ದಾಳಿ ನಡೆಸಿ ಕ್ಲಿನಿಕ್‌ಗಳ ಬಾಗಿಲು ಮುಚ್ಚಿಸಿರುವ ಘಟನೆ ಭಾನುವಾರ ಪಟ್ಟಣದಲ್ಲಿ ನಡೆದಿದೆ.
ಸರ್ಕಾರದಿಂದ ಪರವಾನಗಿ ಪಡೆಯದೆ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕ್ಲಿನಿಕ್ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ರಂಗಸ್ವಾಮಿ ಭಾನುವಾರ ಪಟ್ಟಣದ ಮಟನ್ ಮಾರುಕಟ್ಟೆ ರಸ್ತೆಯಲ್ಲಿರುವ ರಾಂರಾಣಿ ಹಾಗೂ ಡಿವಿಜಿ ರಸ್ತೆಯಲ್ಲಿರುವ ಬಾಲಾಜಿ ಕ್ಲಿನಿಕ್‌ಗಳ ಮೇಲೆ ಏಕಾಏಕಿ ದಾಳಿ ನಡೆಸಿದರು. ಸಂಬಂಧಿಸಿದ ದಾಖಲೆ ತೋರಿಸದ ಕಾರಣ ತಕ್ಷಣ ಕ್ಲಿನಿಕ್‌ಗಳನ್ನು ಮುಚ್ಚಿಸಿದರು. ಈ ಹಿಂದೆ ತಾಲೂಕಿನಲ್ಲಿ ಸರ್ಕಾರದಿಂದ ಪರವಾನಗಿ ಪಡೆಯದೇ ಅನಧಿಕೃತವಾಗಿ  ನಡೆಸುತ್ತಿರುವ ಕ್ಲಿನಿಕ್‌ಗಳನ್ನು ಮುಚ್ಚುವಂತೆ ತಿಳಿಸಲಾಗಿತ್ತು. ಆದರೂ ಅನಧಿಕೃತ ಕ್ಲಿನಿಕ್‌ಗಳನ್ನು ನಡೆಸುತ್ತಿರುವುದು ತಿಳಿದು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಬೇಕಾಯಿತು ಎಂದರು.
ಈ ಸಂಬಂಧ ಸ್ಥಳೀಯ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ  ಆಸ್ಪತ್ರೆ ಆಡಳಿತಾಧಿಕಾರಿ ಡಾ. ಮಂಜೇನಾಯಕ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement