ಕುಡಿಯುವ ನೀರು ನೀಡಲು ಸಿಎಂಗೆ ಮನವಿ
ಶ್ರೀನಿವಾಸಪುರ: ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿರುವ 4,323 ಕರೆಗಳಿಗೆ ನೀರು ಪೂರೈಸಬೇಕು, ಮಾವು ಸಂಸ್ಕರಣ ಘಟಕ ಪ್ರಾರಂಭಿದಬೇಕೆಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಳೆ ಇಲ್ಲದೆ ಮಾವಿನ ಫಸಲು ಒಣಗುತ್ತ್ತಿದೆ, ಕುಡಿಯುವ ನೀರಿಗಾಗಿ ಹಾಹಾಕಾರ ಏರ್ಪಟ್ಟಿದೆ, ಎತ್ತಿನ ಹೊಳೆ ಯೋಜನೆಯನ್ನು ಶೀಘ್ರವೇ ಪ್ರಾರಂಭಿಸಬೇಕು ಮತ್ತು ಮಾವಿನ ಮಂಡಲಿ ಕಚೇರಿಯನ್ನು ಹೊಗಳಗೆರೆ ಗ್ರಾಮದ ತೋಟಗಾರಿಕಾ ಇಲಾಖೆಗೆ ಬದಲಾಯಿಸಿಕೊಡುವಂತೆ ಮನವಿ ಮಾಡಿದರು. ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪರಿಗೆ ಓಟು ಹಾಕಲು ಮನವಿ ಮಾಡಿದರು.