ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠ, ದೇಶದಲ್ಲಿ ಮತ್ತೆ ಅಧಿಕಾರ ನಿಶ್ಚಿತ

Mainashree
Updated On : 23 Feb 2014, 11:03 am

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ, ಇನ್ನು ನಾಲ್ಕು ವರ್ಷ ಮೂರು ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಭದ್ರವಾಗಿರುತ್ತದೆ, ರಾಷ್ಟ್ರದಲ್ಲೂ ಮತ್ತೆ ನಮ್ಮ ಪಕ್ಷಕ್ಕೆ ಅಧಿಕಾರ ನಿಶ್ಚಿತ ಎಂದು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಶ್ರೀನಿವಾಸಪುರದಲ್ಲಿ ಭಾನುವಾರ ಅವರು ಜಿಲ್ಲಾ ಆಡಳಿತದಿಂದ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ರಾಜ್ಯದ ಜನತೆ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಸಹಕಾರ ನೀಡಿದಲ್ಲಿ ಉತ್ತಮ ಆಡಳಿತ ನೀಡಲು ಅನುಕೂಲವಾಗುತ್ತದೆ ಎಂದರು.
ರಮೇಶ್ ಕುಮಾರ್ ಅವರನ್ನು ಶ್ರೀನಿವಾಸಪುರ ಕ್ಷೇತ್ರದ ಮತದಾರರು ಶಾಸಕರನ್ನಾಗಿ ಆಯ್ಕೆ ಮಾಡಿರುವುದರಿಂದ ಸರ್ಕಾರಕ್ಕೆ ಶಕ್ತಿ ಬಂದಿದೆ. ಕೇವಲ 9 ತಿಂಗಳಲ್ಲಿ ರಮೇಶ್ ಕುಮಾರ್ ಶ್ರೀನಿವಾಸಪುರ ಕ್ಷೇತ್ರಕ್ಕೆ 560 ಕೋಟಿ ರು.ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಿ ಅದಕ್ಕೆ ಚಾಲನೆ ಸಿಗುವಂತೆ ಮಾಡಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಹಿಂದೆ ಇದ್ದ ಶಾಸಕರಾಗಿದ್ದ ವೆಂಕಟಶಿವಾರೆಡ್ಡಿ ವಿಧಾನಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತನಾಡಿಯೇ ಇರಲಿಲ್ಲ, ಅಧಿಕಾರ ಇದ್ದಾಗ ಜನರ ಋಣ ತೀರಿಸಬೇಕು, ರಮೇಶ್ ಕುಮಾರ್ ಸರ್ಕಾರದ ಮೇಲೆ ಒತ್ತಡ ತಂದು ಎತ್ತಿನ ಹೊಳೆ ಯೋಜನೆಗೆ ಮಂಜೂರಾತಿ ಸಿಗುವಂತೆ ಮಾಡಿದ್ದಾರೆ, ಈ ಯೋಜನೆಗೆ ಸರ್ಕಾರದಿಂದ ಆಡಳಿತಾತ್ಮಕ ಒಪ್ಪಿಗೆ ಸಿಗಲು ಶಾಸಕರ ಸಿಂಹಪಾಲು ಇದೆ ಎಂದರು. ಜೆಡಿಎಸ್ ನಾಯಕರು ಅಧಿಕಾರದಲ್ಲಿದ್ದಾಗ ಶಾಶ್ವತ ನೀರಾವರಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ, ಈಗ ಶಾಶ್ವತ ನೀರಾವರಿ ಬೇಕೆಂದು ಹೇಳುತ್ತಾರೆಂದು ಯಾರ ಹೆಸರು ಹೇಳದೆ ಸೂಚ್ಯವಾಗಿ ನುಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement