8 ಅಕ್ರಮ ಮರಳು ಲಾರಿಗಳ ವಶ
ಚಿಂತಾಮಣಿ: ತಾಲೂಕಿನ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕೈವಾರ ಮತ್ತು ಜೋಡಿ ಹೊಸಹಳ್ಳಿ ಗ್ರಾಮಗಳ ಮುಖಾಂತರ ರಾತ್ರೋರಾತ್ರಿ ಅಕ್ರಮವಾಗಿ ಬೆಂಗಳೂರಿಗೆ ಮರಳು ತುಂಬಿಕೊಂಡು ಹೋಗುತ್ತಿದ್ದ ಎಂಟು ಮರಳು ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹೊನ್ನೇಗೌಡ ಹಾಗೂ ಸಿಬ್ಬಂದಿ ದಾಳಿ ನಡೆಸಿ ಈ ಲಾರಿಗಳನ್ನು ವಶಪಡಿಸಿಕೊಂಡು ಚಿಕ್ಕಬಳ್ಳಾಪುರ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.