ಅಂಬರೀಷ್ ಆರೋಗ್ಯಕ್ಕೆ ಕರವೇಯಿಂದ ವಿಶೇಷ ಪೂಜೆ
ಬಾಗೇಪಲ್ಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ವಸತಿ ಸಚಿವ ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಟ ಅಂಬರೀಷ್ ರವರು ಶೀಘ್ರವಾಗಿ ಗುಣಮುಖವಾಗಲೆಂದು ಕರವೇ, ರೈತ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಪಟ್ಟಣದ ಶ್ರೀ ಬೈಲಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಅಂಬರೀಷ್ರವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ಪುರಸಭೆ ಮುಖ್ಯಾಧಿಕಾರಿ ಆರ್.ಶ್ರೀಕಾಂತ್, ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಟಿ. ಲಕ್ಷ್ಮೀನಾರಾಯಣರೆಡ್ಡಿ, ತಾಲೂಕು ಅಧ್ಯಕ್ಷ ಬಿ. ನಾರಾಯಣಸ್ವಾಮಿ, ಜಿಲ್ಲಾ ಕರವೇ ಮುಖಂಡರಾದ ಸೀನಾ, ಗೋಪಿ, ಅಶ್ವತ್ಥಪ್ಪ, ಜಬೀವುಲ್ಲಾ ಹಾಜರಿದ್ದರು.
ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ
ಕೆಜಿಎಫ್: ಕಳೆದ ತಿಂಗಳಿಂದ ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರೂ ಕ್ರಮ ಜರುಗಿಸದ ಕಾರಣ ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆತಡೆ ಮಾಡಿದ ಘಟನೆ ಪಾರಂಡಹಳ್ಳಿ ಗ್ರಾಪಂ ವ್ಯಾಪ್ತಿಯ ಮಲ್ಲಂಪಲ್ಲಿ ಹಾಗೂ ಉದಯನಗರ ಗ್ರಾಮದಲ್ಲಿ ನಡೆದಿದೆ. ಪಾಂರಂಡಹಳ್ಳಿ ಗ್ರಾಪಂನಿಂದ ಮೂರು ಕೊಳವೆ ಬಾವಿಗಳನ್ನು ಕೊರೆಸಿದ್ದು ಟ್ಯಾಂಕ್ ನಿರ್ಮಿಸಿ 2 ತಿಂಗಳು ಕಲೆಯುತ್ತಿದ್ದರೂ ಕೊಳವೆ ಬಾವಿಗೆ ಪಂಪ್ ಮತ್ತು ಪೈಪ್ಗಳನ್ನು ಅಳವಡಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಪಾರಂಡಹಳ್ಳಿ ಗ್ರಾಪಂ ವ್ಯಾಪ್ತಿಯ ಉದಯನಗರ ಹಾಗೂ ಮಲ್ಲಂಪಳ್ಳಿ ಗ್ರಾಮಗಳ ನೂರಾರು ಗ್ರಾಮಸ್ಥರು ಹಾಜರಿದ್ದರು.