ಅಪರಿಚಿತ ವ್ಯಕ್ತಿಯ ಶವ ಪತ್ತೆ
ಚಿಂತಾಮಣಿ: ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಂದಿಗಾನಹಳ್ಳಿ ಬಳಿ ಇರುವ ಗಂಗಮ್ಮ ದೇವಾಲಯ ಬಳಿ ತೆಂಗಿನ ತೋಪು ಹತ್ತಿರ ಸುಮಾರು 50 ವರ್ಷದ ಪುರುಷರ ಶವ ಪತ್ತೆಯಾಗಿದೆ. ಇದನ್ನು ಕಂಡ ನರೆಹೊರೆ ಗ್ರಾಮಸ್ಥರು ತಕ್ಷಣ ಬಟ್ಲಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಸಬ್ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ನಂತರ ಶವವನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ಕ್ರಮ ಕೈಗೊಂಡಿದ್ದಾರೆ.