ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಕ್ರಮ ಸಿಬಿಐ ತನಿಖೆಗೆ ಆಗ್ರಹ

Rashmi Kasaragodu
Updated On : 26 Feb 2014, 1:32 am

ವಿಧಾನಪರಿಷತ್:  ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ಗಳ ಅಕ್ರಮ ಕುರಿತಂತೆ ಸಿಬಿಐ ತನಿಖೆ ಆಗಬೇಕು ಎಂದು ಬಿಜೆಪಿಯ ಡಿ.ಎಸ್.ವೀರಯ್ಯ ಹಾಗೂ ವೈ.ಎ.ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಇವೆರಡು ಜಿಲ್ಲೆಗಳಲ್ಲಿ 181 ಸಹಕಾರ ಬ್ಯಾಂಕ್ಗಳಿವೆ. ಕೇಂದ್ರ ಸರ್ಕಾರದ ಕೃಷಿ ಸಾಲ ಮನ್ನಾ ಯೋಜನೆಗೆ 105.08 ಕೋಟಿ ಬಿಡುಗಡೆಯಾಗಿತ್ತು. ಈ ಹಣವನ್ನು ಜಮಾ ಮಾಡಿಕೊಂಡಿರುವ ಬ್ಯಾಂಕ್ನ ಅಧಿಕಾರಿಗಳು ರೈತರ ಖಾತೆಗೆ ಪಾವತಿ ಮಾಡಿಲ್ಲ. ಇದಲ್ಲದೇ ಡಿಸಿಸಿ ಬ್ಯಾಂಕ್ಗಳ ಪುನಶ್ಚೇತನಕ್ಕೆ ನೀಡಿರುವ 78 ಕೋಟಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದರಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ. ಸಿಬಿಐ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಬೇಕು ಎಂದು ವೀರಯ್ಯ ಒತ್ತಾಯಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ನಡೆಯುತ್ತಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಸಹಕಾರ ಸಚಿವ ಎಚ್.ಎಸ್.ಮಹಾದೇವ್ಪ್ರಸಾದ್ ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement