ಸಚಿವ ಆರ್. ರೋಷನ್ ಬೇಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ
ಬೆಂಗಳೂರು: ಮೂಲ ಸೌಲಭ್ಯ ಅಭಿವೃದ್ಧಿ ಮತ್ತು ವಾರ್ತಾ, ಹಜ್ ಸಚಿವ ಆರ್. ರೋಷನ್ ಬೇಗ್ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಚಿವರು ಫೆ.28ರಂದು ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿ, ಗೌರಿಬಿದನೂರಿನಲ್ಲಿ ಜಿಲ್ಲಾ ಉದ್ದಿಮೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಹಾರ ಖಾತೆ ಸಚಿವ ದಿನೇಶ್ ಗುಂಡೂರಾವ್ ಈವರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.