ಗುಣಮಟ್ಟದಲ್ಲಿ ರಾಜಿ ಇಲ್ಲ: ಶಾಸಕ
ಚಿಂತಾಮಣಿ: ಉತ್ತಮ ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರು ಜವಾಬ್ದಾರಿ ತೆಗೆದುಕೊಂಡು ಕಾರ್ಯನಿರ್ವಹಿಸಲಿ. ಕಳಪೆ ಕಾಮಗಾರಿ ಬಗ್ಗೆ ದೂರುಗಳು ಬಂದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಹೇಳಿದರು.
ತಾಲೂಕಿನ ವೈಜಕೂರು ಮತ್ತು ಅಕ್ಕಿಮಂಗಲ ಗ್ರಾಮಗಳಲ್ಲಿ ಸುವರ್ಣ ಗ್ರಾಮ ಯೋಜನೆಯಡಿ 51 ಲಕ್ಷ ರು. ವೆಚ್ಚದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಗುತ್ತಿಗೆದಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗುಣಮಟ್ಟ ಕಾಮಗಾರಿ ನೆರವೇರಿಸಲು ತಾಕೀತು ಮಾಡಿದರು. ಜೆಡಿಎಸ್ ತಾಲೂಕು ಅಧ್ಯಕ್ಷ ಟಿ.ಎನ್. ರಾಜಗೋಪಾಲ್ ಮಾತನಾಡಿದರು. ಎಚ್. ನಾರಾಯಣಸ್ವಾಮಿ, ಪಿಡಿಒ ಮಂಜುನಾಥ್, ಬನಹಳ್ಳಿ ರವಿ, ರಾಮಚಂದ್ರಪ್ಪ ಇದ್ದರು.