ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ನಮೋ ಆಯ್ಕೆ

Rashmi Kasaragodu
Updated On : 28 Feb 2014, 1:35 am

ಗೌರಿಬಿದನೂರು: ದೇಶದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ, ಭಯೋತ್ಪಾದನೆ, ಆಡಳಿತದಲ್ಲಿ ಅರಾಜಕತೆ ಇವುಗಳನ್ನು ಹೋಗಲಾಡಿಸಿ ದಕ್ಷ ಆಡಳಿತವನ್ನು ಪಡೆಯಬೇಕಾಗಿರುವುದರಿಂದ ಮೋದಿ ಪ್ರಧಾನಮಂತ್ರಿಯಾಗುವುದು ಅನಿವಾರ್ಯ  ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಂ. ರವಿರನಾರಾಯಣರೆಡ್ಡಿ ತಿಳಿಸಿದರು.
ಪಟ್ಟಣದ ಎಂ.ಜಿ. ವೃತ್ತದಲ್ಲಿ ಬಿಜೆಪಿ ಜಿಲ್ಲಾ  ಬಿಜೆಪಿ ಯುವ ಮೋರ್ಚಾದಿಂದ ಹಮ್ಮಿಕೊಂಡಿದ್ದ ನಮೋ ಟೀ ಸ್ಟಾಲ್ ಹಾಗೂ ಮೋದಿ ಕನಸಿನ ಭಾರತದ ಬಗ್ಗೆ ಏರ್ಪಡಿಸಿದ್ದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ಭಾರತೀಯ ಜನತಾ ಪಕ್ಷದಲ್ಲಿ ತಳಮಟ್ಟದಿಂದ ದುಡಿದು ಗುಜರಾತ್‌ನಲ್ಲಿ ದಕ್ಷ ಮುಖ್ಯಮಂತ್ರಿಯಾಗಿ ಆಡಳಿತ ನೀಡಿ ಇಂದು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು ಭ್ರಷ್ಟಾಚಾರ ರಹಿತವಾದ ಆಡಳಿತಕ್ಕಾಗಿ ಬಿಜೆಪಿಯನ್ನು ಗೆಲ್ಲಿಸಿ ಎಂದರು. ಕಾರ್ಯಕ್ರಮದಲ್ಲಿ ಎಚ್.ಎಸ್. ಮುರಳೀಧರ್, ಯುವ ಬಿಜೆಪಿ ಜಿಲ್ಲಾಧ್ಯಕ್ಷ ಮಂಜುನಾಥ್, ರಮೇಶ್ ರಾವ್, ಪುರಸಭಾ ಸದಸ್ಯ ಮಾರ್ಕೆಟ್ ಮೋಹನ್, ಕೋಮುಲ್ ಮಾಜಿ ಅಧ್ಯಕ್ಷ ಎಸ್. ರಮೇಶ್, ತಾಲೂಕು ಅಧ್ಯಕ್ಷ ಗೋಪಿನಾಥ್, ಶ್ರೀನಿವಾಸ್ ಮೂರ್ತಿ, ನಾಗರಾಜ್, ರಾಮಾಂಜಿನೇಯ, ವಕ್ತಾರ ಜಯಣ್ಣ, ಮುಂತಾದವರು ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement