ಗ್ರಾಪಂ ಅಧ್ಯಕ್ಷರ ಆಯ್ಕೆ
ಮಾಲೂರು: ತಾಲೂಕಿನ ಅಬ್ಬೇನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಲಕ್ಷ್ಮಮ್ಮ ಗೋಪಾಲ್ ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಹಿಂದೆ ಅಧ್ಯಕ್ಷರಾಗಿದ್ದ ವಿಶ್ವನಾಥ್ ರಾಜಿನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಮುಂದಿನ ಒಂಭತ್ತು ತಿಂಗಳ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಲಕ್ಷಮ್ಮಳ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿದ್ದ ತಾಪಂ ಕಾರ್ಯನಿರ್ವಹಣಾಧಿಕಾರಿ ಸಂಜೀವಪ್ಪ ಘೋಷಿಸಿದರು. ಅದ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ನೂತನ ಅಧ್ಯಕ್ಷೆ ಲಕ್ಷಮ್ಮ, ಮುಂಬರಲಿರುವ ಬೇಸಿಗೆ ಎದುರಿಸಲು ಬೇಕಾದ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು, ರಘುನಾಥ್,ಅಂಜನಿ ಸೋಮಣ್ಣ, ಗೋಪಾಲ್ರೆಡ್ಡಿ, ಮಹೇಶ್ಕುಮಾರ್, ಸುನೀಲ್, ಶಬ್ಬೀರ್,ಪ್ರಕಾಶ್ ಇದ್ದರು.