ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜನಪದ ಕಲಾವಿದರ ಏಳಿಗೆಗಾಗಿ ಪ್ರಯತ್ನ: ಶ್ರೀನಿವಾಸ್

Rashmi Kasaragodu
Updated On : 1 Mar 2014, 12:59 pm

ಕೋಲಾರ: ರಾಜ್ಯದ ಎಲ್ಲಾ ಜಾನಪದ ಕಲಾವಿದರ ಏಳಿಗೆಗಾಗಿ ಮತ್ತು ಜಾನಪದ ಕಲೆಯನ್ನು ಉಳಿಸಿ ಬೆಳೆಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್ ಹೇಳಿದರು.
ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ಸ್ಪೀಕರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನೆಲ ಸಂಸ್ಕೃತಿಯ ಶ್ರಮಿಕ ವರ್ಗದ ಜಾನಪದ ಕಲೆ ಮತ್ತು ಕಲಾವಿದರನ್ನು ಗುರುತಿಸಿ ಅವರಿಗೆ ಸ್ವಾಭಿಮಾನದ ಬದುಕು ಕಲ್ಪಿಸುವ ಮೂಲಕ ಅವರಲ್ಲಿರುವ ಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಅಕಾಡೆಮಿ ಮಾಡಲಿದೆ ಎಂದರು.
ಅಧಿಕಾರ ಸ್ಪೀಕರಿಸುವ ಮುನ್ನ ಕೋಲಾರ ನಗರಕ್ಕೆ ಆಗಮಿಸಿದ ಪಿಚ್ಚಳ್ಳಿ ಶ್ರೀನಿವಾಸ್ ತಮ್ಮ ಅಭಿವೃದ್ಧಿಗೆ ಪ್ರೋತ್ಸಾಹ ನೀಡಿದ ಹಿರಿಯ ಪತ್ರಕರ್ತ ಸಿ.ಎಂ. ಮುನಿಯಪ್ಪ ಮತ್ತು ಆದಿಮ ಸಂಸ್ಥೆಯ ಕೋಟಿಗಾನಹಳ್ಳಿ ರಾಮಯ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾದ ಪಿಚ್ಚಳ್ಳಿ ಶ್ರೀನಿವಾಸ್‌ರನ್ನು ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕ ಬಿ.ಟಿ. ಮುನಿರಾಜಯ್ಯ, ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ಜಾನಪದ ಅಕಾಡೆಮಿ ಬಿ.ಎನ್. ಪರೆಡ್ಡಿ, ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಮನ್ವಯಾಧಿಕಾರಿ ಕಾ.ತಾ. ಚಿಕ್ಕಣ್ಣ, ಹಿರಿಯ ಸಾಹಿತಿ ವಿಮರ್ಶಕ ಲಕ್ಷ್ಮೀಪತಿ ಕೋಲಾರ, ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜೆ.ಜಿ. ನಾಗರಾಜ್, ರತ್ನಪ್ಪ ಮುಂತಾದವರು ಅಭಿನಂದನೆ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement